ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

Date:

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ‘ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ’ ಮತ್ತು ಅಖಿಲ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘ’ದ ನೇತೃತ್ವದಲ್ಲಿ ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

“ರಾಜ್ಯದ ಕುಕ್ಕುಟೋದ್ಯಮದಲ್ಲಿ ಸುಮಾರು 25,000 ಕೋಳಿ ಸಾಕಾಣಿಕೆದಾರ ರೈತರು, ಲಕ್ಷಕ್ಕೂ ಹೆಚ್ಚಿನ ಕೃಷಿ ಕೂಲಿಕಾರರು, ಹತ್ತಾರು ಸಾವಿರ ಮಾಂಸದ ಅಂಗಡಿ ಮಾಲೀಕರು ಹಾಗೂ ಆ ಅಂಗಡಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹತ್ತಾರು ಕಂಪನಿಗಳು ಮತ್ತು ಆರೋಗ್ಯ ಪೂರ್ಣ ಕೋಳಿ ಮಾಂಸವನ್ನು ಸೇವಿಸುವ ಕೋಟ್ಯಂತರ ಗ್ರಾಹಕರನ್ನು ಒಳಗೊಂಡ ಈ ಉದ್ಯಮ ರಾಜ್ಯದಲ್ಲಿ ಗಮನಾರ್ಹ ಮುನ್ನಡೆ ಸಾಧಿಸುತ್ತಿದೆ” ಎಂದು ರೈತರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

“ಆದರೆ, ಕಳೆದ ಹಲವು ವರ್ಷಗಳಿಂದ ಕೋಳಿ ಸಾಕಾಣಿಕೆದಾರ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಸಮಸ್ಯೆಗಳು ಇನ್ನಷ್ಟು ಉಲ್ಬಣಗೊಂಡಿವೆ. ಹಲವು ರೈತರು ತಮ್ಮ ಬಂಡವಾಳ ಕಳೆದುಕೊಂಡು ಬ್ಯಾಂಕ್ ಸಾಲಗಳನ್ನು ತೀರಿಸಲಾಗದೆ ದಿವಾಳಿಯ ಅಂಚಿಗೆ ತಲುಪಿದ್ದಾರೆ. ಕಂಪನಿಗಳ ಶೋಷಣೆಯ ಜೊತೆಗೆ, ಇಷ್ಟು ದೊಡ್ಡ ಕ್ಷೇತ್ರದ ವಹಿವಾಟಿನ ಬಗ್ಗೆ ಕನಿಷ್ಠ ನಿಖರ ಮಾಹಿತಿಯೂ (ರೈತರು, ಕಂಪನಿಗಳು, ವ್ಯಾಪಾರಸ್ಥರ ಅಂಕಿ-ಸಂಖ್ಯೆಗಳು) ಸರ್ಕಾರಗಳ ಬಳಿ ಇಲ್ಲದಿರುವುದು ಮತ್ತು ಸರ್ಕಾರಗಳ ನಿರ್ಲಕ್ಷ್ಯವೇ ರೈತರ ಈ ಸ್ಥಿತಿಗೆ ಕಾರಣ” ಎಂದು ಸಂಘದ ಮುಖಂಡರು ಆರೋಪಿಸಿವೆ.

ದರ ನಿಗದಿ ಇತಿಹಾಸ ಮತ್ತು ಜಾರಿ ವಿಳಂಬದ ಆರೋಪ

“2021ರಲ್ಲಿ ರೈತರ ಸತತ ಹೋರಾಟದ ಒತ್ತಡದ ಹಿನ್ನೆಲೆಯಲ್ಲಿ 2021ರಲ್ಲಿ ಅಂದಿನ ಪಶುಸಂಗೋಪನಾ ಇಲಾಖೆಯ ಜವಾಬ್ದಾರಿ ಹೊಂದಿದ್ದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕನಿಷ್ಠ ಸಾಕಾಣಿಕೆ ದರವನ್ನು ಪ್ರತಿ ಕೆ.ಜಿ. ತೂಕಕ್ಕೆ ರೂ.6.20 ನಿಗದಿಪಡಿಸಲಾಗಿತ್ತು. ಉತ್ಪಾದನಾ ವೆಚ್ಚ ಏರಿಕೆ ಹಾಗೂ ರೈತರ ನಷ್ಟವನ್ನು ಗಮನಿಸಿ ದರವನ್ನು ರೂ.20ಕ್ಕೆ ಏರಿಸುವಂತೆ ಒತ್ತಾಯಗಳು ಕೇಳಿಬಂದಿದ್ದವು. ಇದಕ್ಕೆ ಸ್ಪಂದಿಸಿದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ, ಪಶುಸಂಗೋಪನಾ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಕಂಪನಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಸಭೆಗಳನ್ನು ನಡೆಸಿ, ಕನಿಷ್ಠ ಸಾಕಾಣಿಕೆ ದರವಾಗಿ ಪ್ರತಿ ಕೆ.ಜಿ. ತೂಕಕ್ಕೆ ರೂ.10 ನಿಗದಿಪಡಿಸಲಾಗಿತ್ತು. ಪಶುಸಂಗೋಪನಾ ಕಾರ್ಯದರ್ಶಿಗಳು ಟಿಪ್ಪಣಿ ಸಂಖ್ಯೆ ಪ.ಸಂ.ಮೀ.01 ಕಕೋಮು 2026/25-05-26 ರಂದು ಆಯುಕ್ತರಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದರು” ಎಂದು ರೈತರು ಮಾಹಿತಿ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

“ಈ ಆದೇಶ ಜಾರಿಯಾಗುವ ಪ್ರಕ್ರಿಯೆ ನಡೆಯುತ್ತಿದ್ದ ವೇಳೆಯಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಆದೇಶ ಹೊರಬಿದ್ದು ಏಳು ತಿಂಗಳಾದರೂ, ಮುಖ್ಯಮಂತ್ರಿಗಳ ನಿರ್ದೇಶನದ ಅಗತ್ಯವಿದೆ ಎಂದು ಪಶುಸಂಗೋಪನಾ ಇಲಾಖೆ ಆಯುಕ್ತರು ಹಾಗೂ ಇಂಟಿಗ್ರೇಷನ್ ಕಂಪನಿಗಳ ಮುಖ್ಯಸ್ಥರು ಹೇಳುತ್ತಿರುವುದರಿಂದ ರೈತರಿಗೆ ನ್ಯಾಯಯುತ ದರ ಸಿಗುತ್ತಿಲ್ಲ. ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡದೆ ರೈತರಿಗೆ ಅನ್ಯಾಯವಾಗುತ್ತಿದೆ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿನ್ನೆಲೆಯಲ್ಲಿ, ಪಶುಸಂಗೋಪನಾ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಚಿವರ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ಕರೆದು, ದರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿಗಳನ್ನು ಕೋರಲಾಗಿದೆ.

ಪ್ರಮುಖ ಹಕ್ಕೊತ್ತಾಯಗಳು

  • ಕನಿಷ್ಠ ಸಾಕಾಣಿಕೆ ವೆಚ್ಚವಾಗಿ ಪ್ರತಿ ಕೆ.ಜಿ.ಗೆ ರೂ.10 ನಿಗದಿಯ ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸುವಂತೆ ಇಂಟಿಗ್ರೇಷನ್ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು; ಪ್ರತಿ ವರ್ಷ ಕನಿಷ್ಠ ಶೇ. 10ರಷ್ಟು ಸಾಕಾಣಿಕೆ ವೆಚ್ಚ ಹೆಚ್ಚಿಸಬೇಕು.
  • ಕರ್ನಾಟಕ ಕುಕ್ಕುಟ ನಿಯಂತ್ರಣ ಹಾಗೂ ಅಭಿವೃದ್ಧಿ ಮಸೂದೆ 2022 ಅನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಬೇಕು.
  • ಕೋಳಿ ಸಾಕಾಣಿಕೆಯನ್ನು ಕೃಷಿ ಎಂದು ಪರಿಗಣಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95(1) ಆ ಗೆ ಸೂಕ್ತ ತಿದ್ದುಪಡಿ ತರಬೇಕು.
  • ಕೆಎಂಎಫ್ ಮಾದರಿಯಲ್ಲಿ ಸಹಕಾರ ರಂಗದಲ್ಲಿ ಕುಕ್ಕುಟ ಉದ್ಯಮವನ್ನು ಅಭಿವೃದ್ಧಿಪಡಿಸಿ ಕಾರ್ಪೊರೇಟ್ ಶೋಷಣೆ ನಿಯಂತ್ರಿಸಬೇಕು.
  • ಕೋಳಿ ಸಾಕಾಣಿಕೆ ರೈತರಿಗೆ ಅಗತ್ಯವಿರುವ ಎಲ್ಲಾ ಸವಲತ್ತು-ಸೌಲಭ್ಯ, ಸಹಾಯ ಹಾಗೂ ಸುಲಭ ಸಾಲ ಒದಗಿಸಬೇಕು.
  • ಗುಣಮಟ್ಟದ ಕೋಳಿ ಮರಿ, ಕ್ವಾಲಿಟಿ ಕೋಳಿ ಆಹಾರ ಹಾಗೂ ಉತ್ತಮ ಔಷಧವನ್ನು ರೈತರಿಗೆ ಒದಗಿಸುವುದನ್ನು ಖಾತ್ರಿಪಡಿಸಬೇಕು; ರೈತರ ಮೇಲೆ ಔಷಧ ಮತ್ತಿತರ ವೆಚ್ಚಗಳ ಹೊರೆ ಹಾಕದಂತೆ ಕಂಪನಿಗಳ ಮೇಲೆ ಸೂಕ್ತ ನಿಯಂತ್ರಣ ವಿಧಿಸಬೇಕು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...