ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಹೋಂ ಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಪ್ರವಾಸೋದ್ಯಮ ಇಲಾಖೆ

Date:

ಕೊಡಗಿನ ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ‍್ರಕರಣದ ಹಿನ್ನೆಲೆ, ʼಎಲ್ಲ ಹೋಂ ಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕುʼ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮಂಗಳವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಪ‍್ರಕರಣದ ಕುರಿತು ಉಲ್ಲೇಖಿಸಿ, “ಅಧಿಕಾರಿಗಳು ಈ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಶಾಸಕ ಡಾ.ಮಂತರ್‌ಗೌಡ ಮಾತನಾಡಿ, “ಕೆಲವೆಡೆ ನಿಯಮಗಳ ಉಲ್ಲಂಘನೆಯಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ವರ್ಷಕ್ಕೊಮ್ಮೆಯಾದರೂ ಹೋಂಸ್ಟೇಗಳಲ್ಲಿ ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು” ಎಂದು ತಿಳಿಸಿದರು.

‍‍”ಜಿಲ್ಲೆಯಲ್ಲಿ ಶೇ.20ಕ್ಕೂ ಅಧಿಕ ಹೋಂಸ್ಟೇಗಳು ನೋಂದಣಿಯಾಗಿಲ್ಲ. ಈಗ ಅವುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗುತ್ತಿದೆ” ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ.

ಅಂತೆಯೇ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ವೇಗವಾಗಿ ವಿಸ್ತರಿಸುತ್ತಿರುವ ಹಿನ್ನಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋ ಸ್ಟೇ ಘಟಕಗಳನ್ನು ನಿಯಂತ್ರಿಸಿ, ಪ್ರವಾಸಿಗರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ವಸತಿ ವ್ಯವಸ್ಥೆ ಒದಗಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯು ಕಡ್ಡಾಯ ನೋಂದಣಿ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ಈ ಕುರಿತು ಜಿಲ್ಲಾಡಳಿತದಿಂದ ಪ್ರಕಟಣೆ ಹೊರಡಿಸಿದ್ದು, “ಇತ್ತೀಚಿನ ದಿನಗಳಲ್ಲಿ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಕೂಡಲಸಂಗಮ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಅನೇಕ ಕಡೆಗಳಲ್ಲಿ ಅನುಮತಿ ಇಲ್ಲದೆ ಹೋಂ ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಅನಧಿಕೃತ ಘಟಕಗಳು ಪ್ರವಾಸಿಗರ ಸುರಕ್ಷತೆ, ಸ್ವಚ್ಚತೆ, ಸರ್ಕಾರದ ನಿಯಮಗಳು ಹಾಗೂ ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಧಕ್ಕೆಯನ್ನುಂಟುಮಾಡುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಹೋಂ ಸ್ಟೇ ಮಾಲೀಕರು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕಡ್ಡಾಯವಾಗಿ ನೋಂದಣಿ ಪಡೆದು, ಕಾನೂನು ಬದ್ದವಾಗಿ ಕಾರ್ಯಾಚರಣೆ ಮಾಡಬೇಕು” ಎಂದು ಸೂಚಿಸಲಾಗಿದೆ.

“ನೋಂದಣಿ ಪ್ರಕ್ರಿಯೆಯಲ್ಲಿ ಕಟ್ಟಡದ ಸುರಕ್ಷತೆ, ಸೌಲಭ್ಯಗಳು, ಅಗ್ನಿ ನಿಯಂತ್ರಣ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ಅತಿಥಿಗಳ ದಾಖಲೆ ಸಂಗ್ರಹಣೆ, ಪೊಲೀಸ್ ಪರಿಶೀಲನೆ ಸೇರಿದಂತೆ ಅನೇಕ ಅಂಶಗಳನ್ನು ಪರಿಶೀಲಿಸಲಾಗುತ್ತದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿವಾದ: ಬಿಜೆಪಿ ಅಭ್ಯರ್ಥಿ ಸೇರಿ ಮೂವರ ವಿರುದ್ಧ ಎಫ್‌ಐಆರ್‌

“ಹೋಂ ಸ್ಟೇ ಮಾಲೀಕರು ತಮ್ಮ ಘಟಕಗಳನ್ನು ನೋಂದಾಯಿಸಿಕೊಳ್ಳಲು ಅಗತ್ಯ ದಾಖಲೆಗಳಾದ ಗುರುತಿನ ಪತ್ರ, ಆಸ್ತಿ ದಾಖಲೆಗಳು, ಕಟ್ಟಡ ಅನುಮತಿ, ಪೊಲೀಸ್ ನಿರಾಕ್ಷೇಪಣಾ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ನವನಗರದ ಜಿಲ್ಲಾಡಳಿತ ಭವನ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರ ಕಚೇರಿ ಕೊಠಡಿ ಸಂಖ್ಯೆ 137 ಈ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...