ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಸ್. ನಿಜಲಿಂಗಪ್ಪನವರ ಪುತ್ರಿ ಮತ್ತು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಯಾಗಿದ್ದ ದಿವಂಗತ ಎಸ್.ಬಿ. ಮುದ್ದಪ್ಪ ಅವರ ಪತ್ನಿ ಪ್ರತಿಭಾದೇವಿ ಮುದ್ದಪ್ಪ ಅವರು ಗುರುವಾರ ಮಧ್ಯಾಹ್ನ ಅನಾರೋಗ್ಯದಿಂದ ನಿಧನರಾದರು.
- Advertisement -
ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ಪುತ್ರ ಮತ್ತು ಪುತ್ರಿ ಯನ್ನು ಅಗಲಿದ್ದಾರೆ. ಪ್ರತಿಭಾದೇವಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಬೆಳಿಗ್ಗೆ ವಿಜಯನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.




