ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್​ ಬಂಧನ, ತೀವ್ರಗೊಂಡ ವಿಚಾರಣೆ

Date:

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಕೇಳಿಬಂದಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಆರೋಪ ಸಂಬಂಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ನೋಟಿಸ್‌ ಹಿನ್ನೆಲೆಯಲ್ಲಿ ಶಾಂತಿನಗರದ ಇ.ಡಿ. ಕಚೇರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ದಿನೇಶ್‌ ಕುಮಾರ್‌ ಅವರನ್ನು ಇ.ಡಿ. ಅಧಿಕಾರಿಗಳು ಕೆಲ ಹೊತ್ತು ವಿಚಾರಣೆ ನಡೆಸಿದ ಬಳಿಕ ಸಂಜೆ ಬಂಧಿಸಿದ್ದಾರೆ. ಬಳಿಕ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ನಂತರ ವಿಚಾರಣೆ ನಡೆಸಿದ ನ್ಯಾಯಾಧೀಶರು ಇ.ಡಿ. ಅಧಿಕಾರಿಗಳ ಮನವಿ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ದಿನೇಶ್‌ ಕುಮಾರ್‌ ಅವರನ್ನು ಇ.ಡಿ. ವಶಕ್ಕೆ ನೀಡಿದ್ದಾರೆ.

ದಿನೇಶ್​ ಕುಮಾರ್​ ಅವರು 2022ರಲ್ಲಿ ಮುಡಾ ಆಯುಕ್ತರಾಗಿದ್ದರು. ಇವರ ಅವಧಿಯಲ್ಲಿ 50:50ರ ಅನುಪಾತದಲ್ಲಿ ನೂರಾರು ಕೋಟಿ ರೂ. ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿದ ಆರೋಪ ಕೇಳಿ ಬಂದಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೋಟ್ಯಂತರ ರೂ. ಮೌಲ್ಯದ 14 ಬದಲಿ ನಿವೇಶನ ಕೊಡಿಸುವಲ್ಲಿ ಪ್ರಭಾವ ಬೀರಿರುವ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಅಕ್ರಮ ಹಣ ವರ್ಗಾಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಇ.ಡಿ. ಅಧಿಕಾರಿಗಳು, 2024ರ ಅ. 28ರಂದು ದಿನೇಶ್‌ ಕುಮಾರ್​ ಅವರ ಬಾಣಸವಾಡಿಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ ಶೋಧಿಸಿದ್ದರು. ಈ ವೇಳೆ ದಿನೇಶ್​ ಕುಮಾರ್‌ ವಾಯು ವಿಹಾರಕ್ಕೆ ತೆರಳಿದ್ದರು. ಶೋಧ ಕಾರ್ಯದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ನೋಟಿಸ್​ ಜಾರಿಗೊಳಿಸಿದ್ದರು. ನೋಟಿಸ್​ ಹಿನ್ನೆಲೆಯಲ್ಲಿ ನ. 9 ರಂದು ಇ.ಡಿ. ಅಧಿಕಾರಿಗಳ ಎದುರು ಹಾಜರಾಗಿದ್ದ ದಿನೇಶ್​ ಕುಮಾರ್‌ ವಿಚಾರಣೆ ಎದುರಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಕೇಳಿಬಂದ ಬೆನ್ನಲ್ಲೇ ಮುಡಾ ಆಯುಕ್ತ ದಿನೇಶ್​ ಕುಮಾರ್​ ಅವರನ್ನು ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ವರ್ಗಾಯಿಸಿತ್ತು. ಸರ್ಕಾರದ ಈ ಆದೇಶವು ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿತ್ತು. ಬಳಿಕ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ದಿನೇಶ್‌ ಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದು, ತನಿಖಾಧಿಕಾರಿ ಎಸ್‌ಪಿ ಉದೇಶ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೂ ನಿವೃತ್ತ ನ್ಯಾಯಾಧೀಶ ದೇಸಾಯಿ ಸಮಿತಿಯ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಿಎಂ ಗಾದಿಗೆ ಕಣ್ಣಿಟ್ಟ ಎಚ್‌ಡಿಕೆ; ಬಿಹಾರದ ನಿತೀಶ್‌ ಹಾದಿಯಲ್ಲಿ ಕುಮಾರಸ್ವಾಮಿ?

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. 2028ರಲ್ಲಿ ಕರ್ನಾಟಕದಲ್ಲಿ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...