ಗೌರಿಶಂಕರ್-ಮಂಜುನಾಥ್ ಸೇರ್ಪಡೆ | ಜೆಡಿಎಸ್ ಈಗ ಕೇವಲ ಕುಟುಂಬದ ಪಕ್ಷವಾಗಿದೆ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ಸೆಕ್ಯುಲರ್ ಆಗಿದ್ದ ಜನತಾದಳ ಈಗ ‘ಎಸ್’ ಕಿತ್ತೋಗಿ ಕೇವಲ ಜನತಾದಳ: ಸಿಎಂ
  • ‘ಜೆಡಿಎಸ್‌ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ’

ಜೆಡಿಎಸ್‌ನ ಮಾಜಿ ಶಾಸಕರಾದ ತುಮಕೂರು ಗ್ರಾಮಾಂತರ ಕ್ಷೇತ್ರದ ಡಿ ಎಸ್ ಗೌರಿಶಂಕರ್, ಬೆಂಗಳೂರು ದಾಸರಹಳ್ಳಿಯ ಆರ್ ಮಂಜುನಾಥ್ ಅವರು ಅಪಾರ ಬೆಂಬಲಿಗರ ಜತೆ ಬುಧವಾರ ಕಾಂಗ್ರೆಸ್‌ ಸೇರಿದರು.

ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್‌ಗೆ ಆಗಮಿಸಿದರು.

ಇಬ್ಬರು ನಾಯಕರನ್ನೂ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, “ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ” ಎಂದು  ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

“ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ‘ಎಸ್’ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ ‘ಬಿ’ ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ” ಎಂದರು.

“ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ನಿಮಗೆ ನಾಚಿಕೆ ಆಗತ್ತೋ ಇಲ್ವೋ ಪ್ರಧಾನಿ ಮೋದಿಯವರೇ?

“ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ ‘ಮೋದಿ ಗ್ಯಾರಂಟಿ’ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ವೋ” ಎಂದು ಪ್ರಶ್ನಿಸಿದರು.

“ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಬಿ ಎಲ್ ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಶಾಸಕರಾದ ನರೇಂದ್ರಸ್ವಾಮಿ, ಡಾ. ರಂಗನಾಥ, ನೆಲಮಂಗಲ ಶ್ರೀನಿವಾಸಯ್ಯ, ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಕೆ ಗೋವಿಂದರಾಜು, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X