ಮಾಜಿ ಸಚಿವ, ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್ ವೈ ಮೇಟಿ ನಿಧನ

Date:

ಮಾಜಿ ಸಚಿವ ಎಚ್ ವೈ ಮೇಟಿ ಮಂಗಳವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾದೇ ಕೊನೆಯುಸಿರೆಳೆದಿದ್ದಾರೆ.

- Advertisement -

ಜಯನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್ .ವೈ ಮೇಟಿ ಇಂದು ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ. ಕಾರ್ಡಿಯಾಕ್​ ಅರೆಸ್ಟ್​ನಿಂದ ಅವರು ನಿಧನರಾಗಿದ್ದಾರೆ.

ಅಕ್ಟೋಬರ್​​ 9, 1946 ರಲ್ಲಿ ಜನಿಸಿರುವ ಮೇಟಿ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಾರಿ ಗುಳೇದ ಗುಡ್ಡ ಕ್ಷೇತ್ರದಿಂದ ಶಾಸಕರಾಗಿದ್ದರು. ಎರಡು ಬಾರಿ ಬಾಗಲಕೋಟೆ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡು ಬಾರಿ ಸಚಿವರಾಗಿದ್ದು, 2016 ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮೇಟಿಯವರ ಆರೋಗ್ಯ ವಿಚಾರಿಸಿದ್ದರು. ಎಕ್ಸ್‌ ತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಅವರು ಮೈಸೂರಿನಿಂದ ನೇರವಾಗಿ ಜಯನಗರ ಖಾಸಗಿ ಆಸ್ಪತ್ರೆಗೆ ಆಗಮಿಸಿ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

H Y Meti 1

ಸಿಎಂ ಸಂತಾಪ ಸೇರಿ ಗಣ್ಯರಿಂದ ಸಂತಾಪ

“ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸಂತಪಾ ಸೂಚಿಸಿದ್ದಾರೆ.

“ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ತಿಳಿಸಿದ್ದಾರೆ.

ಸಂಸದ ಬೊಮ್ಮಾಯಿ ಸಂತಾಪ

“ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಚಿವ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪದ ನುಡಿಗಳನ್ನಾಡಿದ್ದಾರೆ.

“ಬಾಗಲಕೋಟೆಯ ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾಗಿದ್ದ ಎಚ್. ವೈ. ಮೇಟಿ ಅವರು ಅನಾರೋಗ್ಯದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ದುಃಖವಾಯಿತು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ದೊರೆತಿತ್ತು. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ ಯೋಜನೆ: ಕೇಂದ್ರದ ನೆರವು ನಾಮಮಾತ್ರ, ಆರ್ಥಿಕ ಹೊರೆಯಲ್ಲಿ ರಾಜ್ಯದ್ದೇ ‘ಸಿಂಹಪಾಲು’

ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಪ್ರಮುಖವಾಗಿರುವ 'ನಮ್ಮ ಮೆಟ್ರೋ' ಯೋಜನೆಯು ಕೇಂದ್ರ...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...