ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕುಟುಂಬಸ್ಥರು ಆಗಮಿಸಿದ್ದಾರೆ.
ನಿನ್ನೆ (ಜು.16) ರಾತ್ರಿ 10 ಗಂಟೆ ಸುಮಾರಿಗೆ ಉಸಿರಾಟದಲ್ಲಿ ದಿಢೀರ್ ಏರುಪೇರು ಉಂಟಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಎರಡು ದಿನಗಳಿಂದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಅವರ ಪುತ್ರ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ. ಸೊಸೆ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಇತರ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.




