ಗೋವಿಂದರಾವ ನೇತೃತ್ವದ ನೂತನ ಪ್ರಾದೇಶಿಕ ಅಸಮತೂಲನಾ ನಿವಾರಣಾ ಆಯೋಗದ ವರದಿ ಆದರಿಸಿ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ನೀಲಿ ನಕ್ಷೆ ಸಿದ್ಧಪಡಿಸಿ ಕಲ್ಯಾಣದ ಸರ್ವಾಂಗೀಣ ಕಾಲಮಿಯ ಅಭಿವೃದ್ಧಿಗೆ ವೈಜ್ಞಾನಿಕ ಕ್ರಿಯಾ ಯೋಜನೆ ರೂಪಿಸಿ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಾದೇಶಿಕ ಅಸಮತೂಲನೆ ನಿವಾರಣೆಗೆ ಕಠಿಣ ಕ್ರಮ ಕೈಗೊಳ್ಳಲು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ ಮತ್ತು ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ ದಸ್ತಿಯವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
“ಈ ಹಿಂದೆ ಎಸ್ ಎಮ್ ಕೃಷ್ಣರವರ ಸರ್ಕಾರದ ಅವಧಿಯಲ್ಲಿ ಪ್ರಾದೇಶಿಕ ಅಸಮತೋಲನಾ ನಿವಾರಣೆಗೆ ನಂಜುಂಡಪ್ಪ ನೇತೃತ್ವದಲ್ಲಿ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ರಚಿಸಲಾಗಿತ್ತು ನಂಜುಂಡಪ್ಪ ನೇತೃತ್ವದ ಆಯೋಗ 2002 ರಲ್ಲಿ ಆಗಿನ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ನಂಜುಂಡಪ್ಪ ವರದಿ ಆದರಿಸಿ ಸರ್ಕಾರ ಹಿಂದುಳಿದ ಪ್ರದೇಶದ, ಜಿಲ್ಲೆಗಳ, ತಾಲೂಕುಗಳ ಅಭಿವೃದ್ಧಿಗೆ ಯೋಜನೆಗಳು ರೂಪಿಸಿರುವಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಕೆಲವಷ್ಟು ಮಹತ್ವದ ಯೋಜನೆಗಳು ಜಾರಿಗೆ ಬಂದವು. ಆದರೆ ಬಹು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಆಗದೆ ಕಲ್ಯಾಣ ಕರ್ನಾಟಕದ ಮಾನವ ಅಭಿವೃದ್ಧಿ ಮತ್ತೆ ಕೊನೆಯ ಸ್ಥಾನದಲ್ಲಿ ಇರುವುದು ಖೇದಕರ ಸಂಗತಿಯಾಗಿದೆ” ಎಂದಿದ್ದಾರೆ.
ʼಇದನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ಅಭಿವೃದ್ಧಿ ಸೂಚ್ಯಂಕಗಳು ಪರಿಷ್ಕರಣೆ ಮಾಡಿ ಪ್ರಾದೇಶಿಕ ಅಸಮತೋಲನಾ ನಿವಾರಣೆಗೆ ಗೋವಿಂದರಾವ ನೇತೃತ್ವದಲ್ಲಿ ನೂತನ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ರಚಿಸಿ ಕಾಲಮಿತಿಯಲ್ಲಿ ವರದಿ ನೀಡಲು ಸೂಚಿಸಿತ್ತು. ಅದರಂತೆ ಗೋವಿಂದರಾವ ನೇತೃತ್ವದ ನೂತನ ಸಮಿತಿ ಸರ್ಕಾರಕ್ಕೆ ಕಾಲಮಿತಿಯಲ್ಲಿ ಅಂದರೆ ಬಜೆಟ್ ಅಧಿವೇಶನದ ಪೂರ್ವದಲ್ಲಿಯೆ ಸರ್ಕಾರಕ್ಕೆ ಅಧಿಕೃತ ವರದಿ ಸಲ್ಲಿಸಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಅನುಭವ ಮಂಟಪ ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆ : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
ʼರಾಜ್ಯ ಸರ್ಕಾರ ಗೋವಿಂದ ನೇತೃತ್ವದ ವರದಿಗೆ ಗಂಭೀರವಾಗಿ ಪರಿಗಣಿಸಿ ತಕ್ಷಣ ನೀಲಿ ನಕ್ಷೆ ಸಿದ್ಧಪಡಿಸಿ ಪ್ರಾದೇಶಿಕ ಅಸಮತೋಲನಾ ನಿವಾರಣೆಗೆ ವೈಜ್ಞಾನಿಕ ಆಧಾರದಂತೆ ಕ್ರಿಯಾ ಯೋಜನೆ ರೂಪಿಸಿ ಕಾಲಮಿತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಕಠಿಣ ಕ್ರಮ ಕೈಗೊಳ್ಳಬೇಕುʼ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸರ್ಕಾರಕ್ಕೆ ಬಲವಾಗಿ ಒತ್ತಾಯಿಸಿದೆ.





