SIR ಅವಧಿ ವಿಸ್ತರಿಸುವಂತೆ ದೇಮ, ಗುಹಾ ಸೇರಿ ನಾಲ್ವರಿಂದ ಹೈಕೋರ್ಟ್‌ಗೆ ಅರ್ಜಿ

Date:

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಖ್ಯಾತ ಸಾಹಿತಿ ದೇವನೂರು ಮಹದೇವ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿವೃತ್ತ ಮೇಜರ್ ಜನರಲ್ ಎಸ್.ಜಿ. ವೊಂಬತ್ಕೆರೆ ಹಾಗೂ ಲೇಖಕಿ ಸಬೀಹಾ ಭೂಮಿಗೌಡ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಅರ್ಜಿಯಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹಾಗೂ ಕರ್ನಾಟಕ ಸರ್ಕಾರವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಹಲವು ಗೊಂದಲಗಳು ಮತ್ತು ಆಡಳಿತಾತ್ಮಕ ಕೊರತೆಗಳಿದ್ದು, ಈ ಕುರಿತು ರಾಜ್ಯ ಸರ್ಕಾರ ಹಾಗೂ ವಿವಿಧ ಸಾರ್ವಜನಿಕ ಸಂಘ-ಸಂಸ್ಥೆಗಳು ಎತ್ತಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ದೊರೆತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಮರ್ಪಕವಾಗಿ ಅಗತ್ಯ ತರಬೇತಿ ಮತ್ತು ಮಾಹಿತಿ ನೀಡಲಾಗಿಲ್ಲ. ಪ್ರಕ್ರಿಯೆಯಲ್ಲಿರುವ ತಾರ್ಕಿಕ ವ್ಯತ್ಯಾಸಗಳು (Logical Discrepancies) ಕುರಿತು ಸ್ಪಷ್ಟತೆ ಇಲ್ಲ. ಅಲ್ಲದೆ, ಮತದಾರರ ನೆರವು ಕೇಂದ್ರಗಳು (Voter Facilitation Centres) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟರೆ ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯಗಳು ದೊರೆಯುವುದಿಲ್ಲ ಎಂಬ ಅರ್ಥದಲ್ಲಿ ಮುಖ್ಯಮಂತ್ರಿ ಬಹಿರಂಗವಾಗಿ ಹೇಳಿಕೆ ನೀಡಿರುವುದನ್ನೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ಪಕ್ಷಾಂತರ ನಿಷೇಧ ಕಾಯ್ದೆಯ ‘ವಿಲೀನ’ ನಿಯಮ ಪ್ರಶ್ನಿಸಿ ಕಪಿಲ್ ಸಿಬಲ್ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಈ ಹಿನ್ನೆಲೆಯಲ್ಲಿ, ಗಣತಿ ನಮೂನೆಗಳ ವಿತರಣೆಯಿಂದ ಹಿಡಿದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವವರೆಗಿನ ಪ್ರಕ್ರಿಯೆಯ ಪ್ರತಿಯೊಂದು ಹಂತದ ಅವಧಿಯನ್ನು ಒಂದರಿಂದ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಚುನಾವಣಾ ಆಯೋಗ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಜತೆಗೆ, ಪ್ರತಿಯೊಂದು ಬೂತ್ ಮಟ್ಟದಲ್ಲೂ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವ ಕಾರಣಕ್ಕೆ ಯಾವುದೇ ವ್ಯಕ್ತಿಗೆ ಸರ್ಕಾರಿ ಕಲ್ಯಾಣ ಯೋಜನೆಗಳ ಸೌಲಭ್ಯವನ್ನು ನಿರಾಕರಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...