ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಹತ್ಯೆಯಾದವರು.
ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಕರು ಏ.17 ರಂದು ಮನೆಗೆ ಬಂದಿದ್ದರು. ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ
ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀ ಲ, ಎಸ್ ಪಿ ಬಿ ಎಸ್ ನೇಮಗೌಡ, ಎಎಸ್ ಪಿ ಎಂ .ಬಿ. ಸಂಕದ, ಡಿವೈಎಸ್‌ಪಿ ಇನಾಂದಾರ ಭೇಟಿ ನೀಡಿದ್ದಾರೆ.
ಕೊಪ್ಪಳದ ಭಾಗ್ಯ ನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮದದ ಹೋಟೆಲ್ ಉದ್ಯಮಿಯಾಗಿದ್ದು ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು
