ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಒದಗಿಸಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, “ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.
“ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಸರ್ಕಾರವು ಉಚಿತ ಬಸ್ ವ್ಯವಸ್ಥೆ ನೀಡಲಿದೆ” ಎಂದಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ!
— DK Shivakumar (@DKShivakumar) July 11, 2025
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್'ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.#KarnatakaPublicSchool pic.twitter.com/tnvwFFEMij
“ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ” ಎಂದು ಅವರು ಹೇಳಿದ್ದಾರೆ.