ಹೆದ್ದಾರಿ ಅಪಘಾತ ಸಂತ್ರಸ್ತರಿಗೆ ₹2.5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಚಿವ ಯು ಟಿ ಖಾದರ್

Date:

ಕರ್ನಾಟಕ ರಾಜ್ಯದ ಹೆದ್ದಾರಿಗಳಲ್ಲಿ ಅಪಘಾತಕ್ಕೊಳಗಾಗುವ ಅಪರಿಚಿತ ವ್ಯಕ್ತಿಗಳಿಗೆ ಮೊದಲ 7 ದಿನಗಳವರೆಗೆ ₹2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.

- Advertisement -

ಕುಮಟಾದಲ್ಲಿ ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಗೆ ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯಲು ಶೀಘ್ರದಲ್ಲೇ ಚರ್ಚೆ ನಡೆಸುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಅಪಘಾತ ಸಂಭವಿಸಿದಾಗ ಸಂತ್ರಸ್ತನ ಗುರುತು, ಆತ ಯಾವ ರಾಜ್ಯದವರು ಅಥವಾ ಯಾವ ದೇಶದವರು ಎಂಬುದು ಮುಖ್ಯವಲ್ಲ; ಮೊದಲು ಜೀವ ಉಳಿಯಬೇಕು. ಅದಕ್ಕಾಗಿ ಅಪಘಾತದ ಮೊದಲ ಏಳು ದಿನಗಳ ಚಿಕಿತ್ಸೆಗೆ ₹2.5 ಲಕ್ಷದವರೆಗೆ ಸರ್ಕಾರವೇ ವೆಚ್ಚ ಭರಿಸುವ ಯೋಜನೆ ರೂಪಿಸಲಾಗುತ್ತಿದೆ” ಎಂದು ಖಾದರ್ ತಿಳಿಸಿದರು.

ಈ ಯೋಜನೆ ರಾಜ್ಯದ ನಿವಾಸಿಗಳಿಗೆ ಮಾತ್ರವಲ್ಲದೆ, ಕರ್ನಾಟಕದ ಹೆದ್ದಾರಿಗಳಲ್ಲಿ ಅಪಘಾತಕ್ಕೊಳಗಾಗುವ ಇತರೆ ರಾಜ್ಯಗಳ ಹಾಗೂ ವಿದೇಶಿ ಪ್ರಜೆಗಳಿಗೂ ಅನ್ವಯವಾಗುವಂತೆ ರೂಪಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ರಾಹುಲ್‌ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಖಂಡನೆ

ಈ ಹಿಂದೆ ‘ಹರೀಶ್‌ ಸಾಂತ್ವನ’ ಯೋಜನೆಯಡಿ ಅಪಘಾತ ಸಂತ್ರಸ್ತರಿಗೆ ನೆರವು ನೀಡಲಾಗುತ್ತಿತ್ತು. ಬಳಿಕ ಕೇಂದ್ರ ಸರ್ಕಾರವೂ ಇದೇ ಮಾದರಿಯ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ರಾಜ್ಯ ಸರ್ಕಾರದ ಹೊಸ ಯೋಜನೆಯಲ್ಲಿ ಚಿಕಿತ್ಸೆಯ ಮಿತಿಯನ್ನು ₹2.5 ಲಕ್ಷಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು. ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲದೆ ಖಾಸಗಿ ಆಸ್ಪತ್ರೆಗಳು ಹಾಗೂ ಟ್ರಾಮಾ ಕೇರ್ ಕೇಂದ್ರಗಳನ್ನೂ ಯೋಜನೆಯ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಚಿಕಿತ್ಸೆಗಾಗಿ ಸರ್ಕಾರದಿಂದ ಆಸ್ಪತ್ರೆಗಳಿಗೆ ನೇರವಾಗಿ ಹಣ ಪಾವತಿಸಲಾಗುವುದು. ಇದರಿಂದ ಆಸ್ಪತ್ರೆಗಳ ನಿರ್ವಹಣೆಯೂ ಸುಗಮವಾಗಲಿದ್ದು, ಅಪಘಾತ ಸಂತ್ರಸ್ತರಿಗೆ ತಕ್ಷಣ ಚಿಕಿತ್ಸೆ ದೊರೆಯಲು ನೆರವಾಗಲಿದೆ ಎಂದು ಖಾದರ್ ಹೇಳಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...