ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮಹತ್ಯೆ!

Date:

ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಬೆಂಗಳೂರಿನ ನಿವಾಸದಲ್ಲಿ ಅವರ ಆಪ್ತ ಸ್ನೇಹಿತ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ (ಜೂನ್ 24) ಬುಧವಾರ ರಾತ್ರಿ ವೈಶಾಖ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೃತ ವೈಶಾಖ್, ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಚ್‌ಎಎಲ್ (HAL) ಪೊಲೀಸರು ವೈಶಾಖ್ ಅವರನ್ನು ಈ ಹಿಂದೆ ಬಂಧಿಸಿದ್ದರು. ಪೊಲೀಸ್ ತನಿಖೆಯ ಪ್ರಕಾರ, ಕಳೆದ ಜನವರಿಯಲ್ಲಿ ಆರೋಪಿಯು ಬ್ಲೂ ಡಾರ್ಟ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿ ಅವರಿಗೆ ಅನಾಮಧೇಯ ಬೆದರಿಕೆ ಪತ್ರ ಕಳುಹಿಸಿದ್ದರು. ಅರವಿಂದ್‌ ರೆಡ್ಡಿ ಅವರೊಂದಿಗೆ ನಟಿ ಲಿವ್-ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು. ಬಳಿಕ ಸಂಬಂಧ ಹಳಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
image 60 1 1

ಆ ಪತ್ರದಲ್ಲಿ ಉದ್ಯಮಿ ಮತ್ತು ಓರ್ವ ಮಹಿಳೆಯ (ನಟಿಯ ಹೆಸರನ್ನು ಪರೋಕ್ಷವಾಗಿ ಉಲ್ಲೇಖಿಸಿ) ನಡುವಿನ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಒಂದು ವೇಳೆ ಬೇಡಿಕೆಯನ್ನು ಈಡೇರಿಸದಿದ್ದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿ, ಆರೋಪಿಯ ಗ್ಯಾರೇಜ್‌ಗೆ 6 ರಿಂದ 7 ಕೋಟಿ ರೂಪಾಯಿ ಹಣವನ್ನು ಕಳುಹಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿತ್ತು. ಈ ಕುರಿತು ಅರವಿಂದ್ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ನಕಲಿ NCERT ಪಠ್ಯಪುಸ್ತಕಗಳ ಹಾವಳಿ; ಅಧಿಕೃತ ಮೂಲಗಳಿಂದ ಮಾತ್ರ ಪುಸ್ತಕ ಪಡೆಯಲು ಸೂಚನೆ

ಇದೀಗ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಟಿ ಕೃಷಿ ತಾಪಂಡ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...