ಗದಗ | ಎಸ್ಐಆರ್‌ನ ಪದದಲ್ಲೇ ಪ್ರಭುತ್ವದ ಹುನ್ನಾರ, ಮೋಸ ಅಡಗಿದೆ: ಚಿಂತಕ ಶಿವಸುಂದರ

Date:

‘ಕೇಂದ್ರ ಸರಕಾರ ತಂದಿರುವ ಎಸ್ಐಆರ್‌ನಲ್ಲಿ ಪದದಲ್ಲೇ ಪ್ರಭುತ್ವದ ಹುನ್ನಾರವಿದೆ. ಇದು ‘ಎಸ್ಐಆರ್ ಅಲ್ಲ ಎಫ್ಐಆರ್’ ಮತಪಟ್ಟಿಯಿಂದ ಸುಮಾರು 20 ಕೋಟಿಗೂ ಹೆಚ್ಚು ಜನರ ಹೆಸರು ಕಡಿತ ಮಾಡಲಾಗುತ್ತದೆ ಹಾಗೂ ಅಷ್ಟು ಜನರು ಮತದಾನ ಪಟ್ಟಿಯಿಂದ ಹೊರಗುಳಿಯುತ್ತಾರೆ ಎಂದು ಗದಗ ಲಯನ್ಸ್ ಭವನದಲ್ಲಿ ಏರ್ಪಡಿಸಿದ್ದ, ‘ಎಸ್‌ಐಆರ್: ಪೌರತ್ವದ ಪ್ರಶ್ನೆ, ಪ್ರಭುತ್ವದ ಹುನ್ನಾರಗಳು’ ಕುರಿತು ನಡೆದ ಸಂವಾದ ಗೋಷ್ಠಿಯಲ್ಲಿ ಚಿಂತಕ ಶಿವಸುಂದರ ಹೇಳಿದರು.

- Advertisement -

ಗದಗ ಮೇ ಸಾಹಿತ್ಯ ಮೇಳ, ಲಡಾಯಿ ಪ್ರಕಾಶನ ಹಾಗೂ ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ದೇಶದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ ಪೂರ್ಣಗೊಳ್ಳುವ ವೇಳೆಗೆ ಈಗಿರುವ 100 ಕೋಟಿ ಮತದಾರರಲ್ಲಿ 20 ಕೋಟಿ ಜನರು ಪಟ್ಟಿಯಿಂದ ಹೊರಗುಳಿಯುತ್ತಾರೆ. ‘ಎಸ್‌ಐಆರ್‌ನಲ್ಲಿರುವ ವಿಶೇಷ ಎಂಬ ಪದದಲ್ಲೇ ಅತಿದೊಡ್ಡ ಹುನ್ನಾರ ಹಾಗೂ ಮೋಸ ಅಡಗಿದೆ. ಇದು ಕೇವಲ ಮತಪಟ್ಟಿ ವಿಶೇಷ ಪರಿಷ್ಕರಣೆಯಾಗದೆ ಈ ದೇಶದ ನಾಗರಿಕರ ನಾಗರಿಕತ್ವದ ಪರಿಷ್ಕರಣೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಎಸ್‌ಐಆ‌ರ್ ಮೂಲಕ ಪ್ರಧಾನಿ ಮೋದಿ ಅವರು ದೇಶದ 140 ಕೋಟಿ ಜನರ ಮೇಲೆ ಆರೋಪ ಪಟ್ಟಿ ಹಾಕಿದ್ದಾರೆ. ಈಗ ಇರುವವರೆಲ್ಲರೂ ಈ ದೇಶದ ನಾಗರಿಕರಲ್ಲ. ನಾವು ಕೇಳುವ ದಾಖಲೆಗಳನ್ನು ಒದಗಿಸಿ ನೀವು ಭಾರತೀಯರು ಎಂದು ಸಾಬೀತುಪಡಿಸಿ ಎಂದು ಅಗ್ನಿ ಪರೀಕ್ಷೆ ಇಟ್ಟಿದ್ದಾರೆ. ಇಲ್ಲಿ ದಾಖಲೆಗಳು ಹೊಂದಾಣಿಕೆಯಾದರೆ ಸಮಸ್ಯೆ ಇಲ್ಲ. ಇಲ್ಲವಾದರೆ ದಾಖಲೆಗಳು ಒದಗಿಸಿಲ್ಲ ಎಂಬ ಕಾರಣಕ್ಕೆ ಈ ದೇಶದ ನಾಗರಿಕರಲ್ಲ ಎಂದು ಹೇಳಿ ಈಗಾಗಲೇ ಕೋಟ್ಯಂತರ ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಇದರಲ್ಲಿ ಮುಸ್ಲಿಮರು, ದಲಿತರು, ಆದಿವಾಸಿಗಳು, ಮಹಿಳೆಯರು ಹೆಚ್ಚು ಇರುತ್ತಾರೆ.

ಏಪ್ರಿಲ್‌ನಿಂದ ಎಸ್‌ಐಆರ್‌ನ ಮೊದಲ ಹಂತ ಆರಂಭಗೊಳ್ಳಲಿದ್ದು, ಪ್ರತಿ ಮನೆಗೆ ಬಿಎಲ್‌ಒಗಳು ಬಂದು ಅರ್ಜಿ ನಮೂನೆ ಕೊಡುವರು. ಅದನ್ನು ಒಂದು ತಿಂಗಳಲ್ಲಿ ಭರ್ತಿ ಮಾಡಿ ಕೊಡಬೇಕು. ನಮ್ಮ ಬಳಿ ಇರುವ ದಾಖಲೆಗಳು ಅವರಿಗೆ ಬೇಕಿಲ್ಲ. ಅವರು ಕೇಳುವ ದಾಖಲೆಗಳನ್ನು ಒದಗಿಸಲು ಸಾಕಷ್ಟು ಜನರಿಗೆ ಆಗುವುದಿಲ್ಲ. ಹಾಗಾಗಿ, ಮುಸ್ಲಿಮರು, ದಲಿತರು, ಆದಿವಾಸಿಗಳು ಮತ್ತು ಮಹಿಳೆಯರು ಈ ದೇಶದ ನಾಗರಿಕರು ಅಲ್ಲ ಎಂದು ಘೋಷಣೆ ಮಾಡುವ ಬಹುದೊಡ್ಡ ಹುನ್ನಾರ ನಡೆದಿದೆ.

ಒಬ್ಬ ಪ್ರಜೆ ಈ ದೇಶದ ನಾಗರಿಕ ಅಲ್ಲ ಎಂದು ಘೋಷಣೆಯಾದರೆ ಬದುಕನ್ನೇ ಕಳೆದುಕೊಳ್ಳುತ್ತಾನೆ. ಮಕ್ಕಳನ್ನು ಶಾಲೆಗೆ ಸೇರಿಸಲು ಸಾಧ್ಯವಿಲ್ಲ. ಸ್ವಂತ ಉದ್ಯೋಗ, ಕಷ್ಟಕಾಲದಲ್ಲಿ ಪೊಲೀಸರಿಗೆ ದೂರು ಕೊಡುವ ಅವಕಾಶವನ್ನೂ ಕಳೆದುಕೊಳ್ಳುತ್ತಾನೆ ಎಂದು ಕಳವಳ ವ್ಯಕ್ತಪಡಿಸಿದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....