ಗ್ರಾಮಗಳ ಉದ್ಧಾರ ಕುರಿತು ಸರಳ, ವೈಜ್ಞಾನಿಕ ಆರ್ಥಿಕ ನೀತಿ ಕೊಟ್ಟವರು ಗಾಂಧಿ: ಸಿದ್ದರಾಮಯ್ಯ

Date:

Advertisements
  • ಗಾಂಧಿಯವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾಗಿತ್ತು
  • ಗಾಂಧಿ ಮತ್ತು ಶಾಸ್ತ್ರಿಯವರ ಬದುಕು ನಮಗೆಲ್ಲ ಆದರ್ಶಪ್ರಾಯವಾಗಿದೆ

ಗ್ರಾಮಗಳ ಉದ್ಧಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಹಾಗೂ ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ಮಹಾತ್ಮ ಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಅವರ 154ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಗಾಂಧಿ ಅವರ ಅಭಿವೃದ್ಧಿ ಮಾದರಿ ಇವತ್ತಿಗೂ ಶ್ರೇಷ್ಠವಾದದ್ದು. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆ ಮತ್ತು ಗೌರವದಿಂದ ಬಾಳಬೇಕು ಎನ್ನುವುದು ಅವರ ಗುರಿಯಾಗಿತ್ತು” ಎಂದರು.

“ಸಮಾಜದ ಕಟ್ಟ ಕಡೆಯ ವ್ಯಕ್ತಿಯಂತೆ ಅರೆ ಬೆತ್ತಲೆಯಾಗಿ ಉಡುಪು ಧರಿಸುತ್ತಿದ್ದರು. ನುಡಿದಂತೆ ನಡೆಯುವುದು ಗಾಂಧಿ ಅವರ ಬದುಕಾಗಿತ್ತು. ಮಹಾತ್ಮಗಾಂಧಿ ಅಪರೂಪದ ಸಂತರಾಗಿದ್ದರು. ಇವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾದದ್ದು. ನೆಹರೂ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನ ಗಾಂಧಿಯವರು ದೆಹಲಿಯಲ್ಲಿ ಇರಲಿಲ್ಲ. ಕೋಲ್ಕತ್ತಾದಲ್ಲಿ ದೇಶ ವಿಭಜನೆಯಿಂದಾದ ಅನಾಹುತಗಳಲ್ಲಿ ನೊಂದವರ ಜನರ ಕಣ್ಣೀರು ಒರೆಸುತ್ತಿದ್ದರು” ಎಂದು ಅವರ ಸರಳತೆ ಮತ್ತು ಸೌಹಾರ್ದದ ಬದುಕನ್ನು ಸ್ಮರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಅಂಚಿಗೆ ಸರಿದ ಗಾಂಧಿ ; ಕ್ಷಯಪೀಡಿತ ಗ್ರಾಮ ಭಾರತ : ಕೆ ಪಿ ಸುರೇಶ್ ಬರೆಹ

“ರವೀಂದ್ರನಾಥ ಠಾಗೂರ ಅವರು ಗಾಂಧಿ ಅವರಿಗೆ ಮಹಾತ್ಮ ಎಂದು ಕರೆದರು. ಗಾಂಧಿ ಅವರ ಸತ್ಯ ಮಾರ್ಗದ ಬದುಕಿನ ಪ್ರತಿ ಹೆಜ್ಜೆಗಳು, ಅವರ ಸತ್ಯಾನ್ವೇಷಣೆ ಠಾಗೂರರು ಮಹಾತ್ಮ ಎಂದು ಕರೆಯಲು ಕಾರಣವಾಯಿತು. ಮಾಜಿ ಪ್ರಧಾನಿ ದಿ.ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಮಹಾತ್ಮಗಾಂಧಿಯವರ ಸರಳತೆ ಮತ್ತು ಆದರ್ಶಗಳನ್ನು ಸಂಪೂರ್ಣವಾಗಿ ಮೈಗೂಡಿಸಿಕೊಂಡ ಅಪ್ಪಟ ಪ್ರಾಮಾಣಿಕ ನಾಯಕರಾಗಿದ್ದರು. ರೈಲು ಅಪಘಾತದ ಹೊಣೆ ಹೊತ್ತು ರಾಜೀನಾಮೆ ನೀಡಿದ ಆದರ್ಶ ನಾಯಕರಾಗಿದ್ದರು. ಹೀಗಾಗಿ ಗಾಂಧಿ ಮತ್ತು ಶಾಸ್ತ್ರಿ ಇಬ್ಬರೂ ನಮಗೆ ಆದರ್ಶಪ್ರಾಯರು” ಎಂದು ಮೆಚ್ಚುಗೆ ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ವಿಧಾನ ಪರಿಷತ್‌ನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X