ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ರದ್ದುಗೊಳಿಸುವಂತೆ ಕೋರಿದ ಕರ್ನಾಟಕದ ಮನವಿ ಮೇರೆಗೆ ಆರೋಪಿಗೆ ಸುಪ್ರೀಂ ನೋಟಿಸ್

Date:

Advertisements

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿ ಮೇರೆಗೆ ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಗೌರಿ ಲಂಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರವಾಗಿ ವಕೀಲ ವಿ ಎನ್‌ ರಘುಪತಿ ಸಲ್ಲಿಸಿದ ಮನವಿಯ ಮೇರೆಗೆ ಆರೋಪಿಗಳಿಂದ ಪ್ರತಿಕ್ರಿಯೆ ಪಡೆಯುವಂತೆ ನ್ಯಾಯಾಧೀಶರಾದ ವಿಕ್ರಮ್‌ ನಾಥ್ ಹಾಗೂ ಚಂದ್ರ ಶರ್ಮಾ ನೇತೃತ್ವದ ಪೀಠವು ನಿರ್ದೇಶನ ನೀಡಿದೆ.

ತಮ್ಮ ಸಹೋದರಿಯ ಹತ್ಯೆಗೆ ಸಂಬಂಧಿಸಿದಂತೆ ಸಹೋದರಿ ಕವಿತಾ ಲಂಕೇಶ್ ಅವರು ಸಲ್ಲಿಸಿದ ಅರ್ಜಿಗೆ ಜನವರಿಯಲ್ಲಿ ಆರೋಪಿಗೆ ಇದೇ ರೀತಿಯ ನೋಟಿಸ್ ಜಾರಿಗೊಳಿಸಿತ್ತು.

Advertisements

ಪ್ರಕರಣದಲ್ಲಿ ದೂರುದಾರರ ಪರವಾಗಿ ಕವಿತ ಪರ ವಕೀಲೆ ಅಪರ್ಣ ಭಟ್ ಹಾಜರಾಗಿದ್ದರು. ಎರಡು ಅರ್ಜಿಗಳನ್ನು ಸೇರಿಸಿ ಆದೇಶಿಸಿರುವ ನ್ಯಾಯಾಲಯವು ಏಪ್ರಿಲ್ 9 ರಂದು ವಿಚಾರಣೆ ಕೈಗೊಳ್ಳಲು ನಿರ್ಧರಿಸಿದೆ.

ಆರೋಪಿ ಮೋಹನ್‌ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7 ರಂದು ಜಾಮೀನು ಮಂಜೂರು ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ಗೌರಿ ನೆನಪು | ಗೌರಿ ಲಂಕೇಶ್‌ ಎಂಬ ಬೆಳಕಿನ ಕಿರಣ; ಬಡವರ ಸಂಗಾತಿ ನನ್ನವ್ವ

ಮುಂಚೂಣಿ ಪತ್ರಕರ್ತೆ ಹಾಗೂ ಚಳುವಳಿಗಾರರಾಗಿದ್ದ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಎದುರು ಸೆಪ್ಟೆಂಬರ್ 5, 2017ರಂದು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

ಆರೋಪಿಯು ಐದು ವರ್ಷಗಳಿಗೂ ಹೆಚ್ಚು ಕಾಲ ಸೆರೆಮನೆ ವಾಸದಲ್ಲಿದ್ದು, ವಿಚಾರಣೆಯಲ್ಲಿ ಅನಗತ್ಯ ವಿಳಂಬ ಉಂಟಾದಾಗ ಜಾಮೀನನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ಗಂಭೀತ ಆರೋಪಗಳಿರುವ ಕೋಕಾ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಮೋಹನ್‌ ನಾಯಕ್ ಎನ್‌ ಎಂಬಾತನ ಆರೋಪಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಏಪ್ರಿಲ್ 22, 2021 ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 21, 2021ರಂದು ತಳ್ಳಿಹಾಕಿತ್ತು.

ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಅಮೋಲ್ ಕಾಳೆಯೊಂದಿಗೆ ಆರೋಪಿ ಮೋಹನ್‌ ನಾಯಕ್ ಕೂಡ ಆತನ ಜೊತೆ ಹಲವು ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X