ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್ ಇನ್ನಿಲ್ಲ

Date:

ಖ್ಯಾತ ಪತ್ರಕರ್ತ ಪಿ. ಲಂಕೇಶ್‌ ಅವರ ಮಡದಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್‌ ಅವರು ಸೋಮವಾರ ನಿಧನರಾಗಿದ್ದಾರೆ.

- Advertisement -

84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್‌ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದಿರಾ ಲಂಕೇಶ್ ಅವರು ಪುತ್ರಿ ಕವಿತಾ ಲಂಕೇಶ್‌ ಮತ್ತು ಪುತ್ರ ಇಂದ್ರಜಿತ್ ಲಂಕೇಶ್‌ ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕನ್ನಡ ಪತ್ರಿಕೋದ್ಯಮದಲ್ಲಿ ಇತಿಹಾಸ ಸೃಷ್ಟಿಸಿದ ‘ಲಂಕೇಶ್ ಪತ್ರಿಕೆ’ಯ ಆರಂಭದ ದಿನಗಳಿಂದಲೂ ಪಿ. ಲಂಕೇಶ್ ಅವರಿಗೆ ಇಂದಿರಾ ಲಂಕೇಶ್ ಅವರು ದೊಡ್ಡ ಬೆಂಬಲವಾಗಿ ನಿಂತಿದ್ದರು. ಲಂಕೇಶ್ ಅವರ ನಿಧನದ ನಂತರವೂ ಪತ್ರಿಕೆ ಮುನ್ನಡೆಸುವಲ್ಲಿ ಹಾಗೂ ಲಂಕೇಶ್ ಪ್ರಕಾಶನದ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಇಂದಿರಾ ಲಂಕೇಶ್ ಅವರು ಸಾಹಿತ್ಯ ಮತ್ತು ಪತ್ರಿಕೋದ್ಯಮ ವಲಯದ ಅನೇಕ ಗಣ್ಯರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಇಂದಿರಾ ಅವರು ‘ಹುಳಿ ಮಾವು ಮತ್ತು ನಾನು’ ಎಂಬ ಆತ್ಮಕಥನವನ್ನೂ ಬರೆದಿದ್ದರು.

ಇಂದಿರಾ ಲಂಕೇಶ್ ಅವರ ಅಂತಿಮ ಸಂಸ್ಕಾರ ನಾಳೆ ಬೆಳಿಗ್ಗೆ 9 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ. ಈಗ ಅವರ ಪಾರ್ತಿವ ಶರೀರವನ್ನು ಕವಿತಾ ಲಂಕೇಶ್ ಅವರ ಮನೆಯಲ್ಲಿ ಇರಿಸಲಾಗಿದೆ.

ಇಂದಿರಾ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. “ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ. ಸ್ವತ: ಬರವಣಿಗೆಯನ್ನೂ ಮಾಡುತ್ತಿದ್ದ ಇಂದಿರಾ ಲಂಕೇಶ್, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೆ ನಡೆದ ಗೌರಿ ಲಂಕೇಶ್ ಹತ್ಯೆಯ ನಂತರ ಆಘಾತಕ್ಕೀಡಾಗಿದ್ದ ಇಂದಿರಾ ಅವರು ಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಇಂದಿರಾ ಲಂಕೇಶ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ದೂರು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುತ್ತಿರುವ...

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...