ಜಿಬಿಎ ಚುನಾವಣೆ | ಸೋಮವಾರದಿಂದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು: ಡಿ.ಕೆ. ಶಿವಕುಮಾರ್

Date:

- ಕಟ್ಟಡ ನಿಧಿಗಾಗಿ ಸಾಮಾನ್ಯ ವರ್ಗಕ್ಕೆ 50 ಸಾವಿರ ರೂ., ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳಿಂದ 25 ಸಾವಿರ ಠೇವಣಿ ಸಂಗ್ರಹ

ಜಿಬಿಎ ಚುನಾವಣೆಗೆ ಮೀಸಲಾತಿ ಇನ್ನೂ ಅಂತಿಮವಾಗಿಲ್ಲ. ಆದರೆ ಸೋಮವಾರದಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿದರು.

- Advertisement -

ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, “ನಿನ್ನೆ ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯ ವರ್ಗಕ್ಕೆ 50 ಸಾವಿರ ರೂ. ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್‌ಲೈನ್‌ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ

ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು” ಎಂದು ಹೇಳಿದರು.

“ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ಭಾನುವಾರದ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್ಷ ಉಳಿಸಿಕೊಳ್ಳಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದರಿಂದ ಸಂತೋಷವಾಗಿದೆ, ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ. ಅಧಿಕಾರ ಸಿಗದ ಕಾರ್ಯಕರ್ತರು ಕೂಡ ತಮ್ಮ ಹಣದಲ್ಲಿ ಈ ಪ್ರತಿಭಟನೆಗೆ ಆಗಮಿಸಿದ್ದಾರೆ” ಎಂದರು.

ನಗರ ಭಾಗದಲ್ಲಿ ಮತ ಕಳ್ಳತನ ಹೆಚ್ಚಾಗಿದೆ ಎಂದು ಕೇಳಿದಾಗ, “ಆಳಂದ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಹೊರ ರಾಜ್ಯಗಳ ಫೋನ್ ನಂಬರ್ ಬಳಸಿ ಮತದಾರರ ಹೆಸರು ತೆಗೆಸಲಾಗಿದೆ” ಎಂದು ತಿಳಿಸಿದರು.

ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ

ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಬಹಳ ವರ್ಷಗಳ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಇದು ಸುಳ್ಳು, ನಾವು ಭೇಟಿಯಾಗಿದ್ದಾಗ ಹೇಳಿಕೊಳ್ಳುವುದಿಲ್ಲ” ಎಂದರು.

ಇಂದಿನ ಭೇಟಿಯಲ್ಲಿ ನಿಮಗೆ ಅಭಯ ಸಿಕ್ಕಿದೆಯಂತೆ, ಸಮಸ್ಯೆ ಬಗೆಹರಿಯಲಿದೆ ಎಂದು ಕೇಳಿದಾಗ, “ನಿಮ್ಮ ಅರ್ಥ ಏನಿದೆಯೋ, ನನಗೆ ಯಾವ ಸಮಸ್ಯೆ ಇಲ್ಲ. ನೀವು (ಮಾಧ್ಯಮಗಳು) ಸಮಸ್ಯೆ ಸೃಷ್ಟಿಸುತ್ತಿದ್ದೀರಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...