ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರರಾಗಿ ಜಿ.ಸಿ ಚಂದ್ರಶೇಖರ್ ನೇಮಕ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಧಾನ ಸಲಹೆಗಾರರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ನೇಮಕವು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

- Advertisement -

ಮುಖ್ಯಮಂತ್ರಿಗೆ ರಾಜಕೀಯ ವ್ಯವಹಾರಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡುವ ಜವಾಬ್ದಾರಿಯನ್ನು ಜಿ.ಸಿ. ಚಂದ್ರಶೇಖರ್ ಅವರಿಗೆ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದು ಗೌರವಾಧಾರಿತ ಹುದ್ದೆಯಾಗಿದ್ದು, ಈ ನೇಮಕಕ್ಕೆ ಸಂಬಂಧಿಸಿದಂತೆ ಯಾವುದೇ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಸರ್ಕಾರಿ ಸೌಲಭ್ಯಗಳಿಗೆ ಅವರು ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಜಿ.ಸಿ. ಚಂದ್ರಶೇಖರ್ ಅವರು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರಾಗಿದ್ದಾರೆ. ಅವರು ಮೂಲತಃ ಹಾಸನದವರು. ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಅವರು ಪಕ್ಷದ ವ್ಯಕ್ತಿಯೆಂದೇ ಗುರುತಿಸಿಕೊಂಡಿದ್ದಾರೆ. ಬೇರೆ ಅಧಿಕಾರದ ಹುದ್ದೆಗಳಿಗಿಂತ, ಪಕ್ಷದ ಕೆಲಸಗಳಿಗಾಗಿ ಹೆಚ್ಚು ದುಡಿದವರು. ಜಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರ ಪಕ್ಷ ನಿಷ್ಠೆಯ ಕಾರಣಕ್ಕಾಗಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿಯೂ ನೇಮಿಸಲಾಗಿತ್ತು. ನಂತರ, ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್‌ನ ಸಂಘಟನಾ ಕಾರ್ಯಾಧ್ಯಕ್ಷರಾಗಿದ್ದರು. ಪ್ರಸ್ತುತ, ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ವಿರುದ್ಧದ ಆಂದೋಲನದಲ್ಲಿ ಕಾಂಗ್ರೆಸ್‌ಅನ್ನು ಮುನ್ನಡೆಸುತ್ತಿದ್ದಾರೆ. ಸದ್ಯ, ಕೆಪಿಸಿಸಿ ಅಧ್ಯಕ್ಷರು ಬದಲಾಗಿರುವ ಕಾರಣ, ಅವರು ಕಾರ್ಯಾಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಇದೀಗ, ಅವರು ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...