ಫೆ.11ರಿಂದ 14ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ ಬಿ ಪಾಟೀಲ್

Date:

Advertisements

ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇವಿ ಕ್ಲಸ್ಟರ್ಸ್ ಸ್ಥಾಪಿಸಲಾಗುವುದು ಎಂದು ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಫೆ.11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಅವರು ಶನಿವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿ, “ಸಮಾವೇಶದ ಮೂಲಕ 10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಬರುವುದು ಖಾತ್ರಿಯಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ 400ಕ್ಕೂ ಹೆಚ್ಚು ನವೋದ್ಯಮಗಳಿಗೆ ಆಸರೆ ನೀಡಲಿರುವ 200 ಎಕರೆ ವಿಸ್ತಾರದ ಸ್ಟಾರ್ಟಪ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದೆ. ಅಲ್ಲದೆ, ವಿಜಯಪುರದ ತಿಡಗುಂದಿಯಲ್ಲಿ 1,200 ಎಕರೆ ವಿಸ್ತೀರ್ಣದಲ್ಲಿ ಸೋಲಾರ್ ಸೆಲ್ ಮತ್ತು ಅಗ್ರೊ ಟೆಕ್ ಪಾರ್ಕ್ ಅಭಿವೃದ್ಧಿ ಪಡಿಸಲಾಗುವುದು” ಎಂದು ತಿಳಿಸಿದರು.

“ಸಮಾವೇಶದಲ್ಲಿ 19 ರಾಷ್ಟ್ರಗಳು ಪಾಲ್ಗೊಳ್ಳುತ್ತಿದ್ದು. ಈ ಪೈಕಿ 10 ರಾಷ್ಟ್ರಗಳೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಹೂಡಿಕೆಗೆ ಇರುವ ಅವಕಾಶಗಳು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ಸ್ಥಾನಮಾನ, ರಾಜ್ಯದಲ್ಲಿ ಮರುಬಳಕೆ ಇಂಧನ ಕ್ಷೇತ್ರದ ಭವಿಷ್ಯ, ಆರೋಗ್ಯ ಸೇವೆ ಮುಂತಾದ ನಿರ್ಣಾಯಕ ಕ್ಷೇತ್ರಗಳನ್ನು ಕುರಿತು ಚರ್ಚಿಸಲಾಗುವುದು” ಎಂದು ಮಾಹಿತಿ ನೀಡಿದರು.

Advertisements

ಸಾಧಕ ಕಂಪನಿಗಳಿಗೆ ಪುರಸ್ಕಾರ

“ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ. ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ/ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳು ಇರಲಿವೆ. ಈ ಕಾರ್ಯಕ್ರಮ ಫೆ.12ರ ಸಂಜೆ ನಡೆಯಲಿದೆ. ವೆಂಚುರೈಸ್’ ಉಪಕ್ರಮದಡಿ ಒಟ್ಟು 3 ಲಕ್ಷ ಡಾಲರ್ ಮೌಲ್ಯದ 9 ಬಹುಮಾನಗಳನ್ನು ಪ್ರದಾನ ಮಾಡಲಾಗುವುದು. ಇದರಲ್ಲಿ ಮೊದಲ ಮೂರು ಸ್ಥಾನಗಳಿಗೆ ಕ್ರಮವಾಗಿ 50 ಸಾವಿರ ಡಾಲರ್, 30 ಸಾವಿರ ಡಾಲರ್ ಮತ್ತು 20 ಸಾವಿರ ಡಾಲರ್ ನಗದು ಪುರಸ್ಕಾರವಿದೆ” ಎಂದರು.

ಹೂಡಿಕೆದಾರರ ಸಮಾವೇಶ ಉದ್ಘಾಟಿಸಲಿರುವ ರಾಜನಾಥ್ ಸಿಂಗ್

ಸಮಾವೇಶದ ಉದ್ಘಾಟನೆಯು ಫೆ.11ರ ಸಂಜೆ 4ಕ್ಕೆ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಘನ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೂ ಪಾಲ್ಗೊಳ್ಳಲಿದ್ದಾರೆ. ಫೆ.11-14ರ ನಡುವೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಎಚ್ ಡಿ ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪೀಯೂಷ್ ಗೋಯಲ್, ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್ ಸಮಾವೇಶಕ್ಕೆ ಬರಲಿದ್ದಾರೆ. ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾರೋಪಕ್ಕೆ ಆಗಮಿಸಲಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X