ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

Date:

“ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಾಗೆಯೇ ಉಳ್ಳಾಲದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ” ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ತಿಳಿಸಿದರು.

- Advertisement -

ಈ ಸಂಬಂಧ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಜಿ ಪರಮೇಶ್ವರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. “ಮಂಗಳೂರಿನ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಇನ್ನೂರು ಬೆಡ್‌ಗಳನ್ನು ಹೆಚ್ಚಿಸಲಾಗುವುದು. ಅದಕ್ಕೆ ಬೇಕಾದ ಮೂಲಭೂತ ಸೌಕರ್ಯ, ಮಾನವ ಸಂಪನ್ಮೂಲ ಒದಗಿಸಲಾಗುವುದು. ಇದು ಪ್ರಾದೇಶಿಕ ಕೇಂದ್ರ ಆಸ್ಪತ್ರೆಯಾಗಿರಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ ತನ್ನದೇ ಧ್ವನಿಯನ್ನು ಕಾಪಾಡಿಕೊಂಡು, ಸ್ವತಂತ್ರವಾಗಿ ಯೋಚಿಸಿ, ಬದುಕಿನ ನೈಜ ಅನುಭವಗಳನ್ನು ಪ್ರಾಮಾಣಿಕವಾಗಿ ದಾಖಲಿಸುವ ಬರಹಗಾರರು ಎಷ್ಟು ಮುಖ್ಯರಾಗುತ್ತಾರೆ ಎಂಬುದಾಗಿದೆ. ತಂತ್ರಜ್ಞಾನ...

ಹಿಂದೂ ಕೋಡ್ ಬಿಲ್ ಹೋರಾಟಕ್ಕೆ 75 ವರ್ಷ: ಸಮಾನತೆಯ...

ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ಹಿಂದೂ ಕೋಡ್ ಬಿಲ್ ಕೇವಲ ಮಹಿಳಾ ಹಕ್ಕುಗಳ ಮಸೂದೆಯಾಗಿರಲಿಲ್ಲ; ಅದು ಶತಮಾನಗಳಿಂದ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಬಲ ಅಸ್ತ್ರವೂ ಆಗಿತ್ತು. ಜಾತಿ ವ್ಯವಸ್ಥೆಯು ಜೀವಂತವಾಗಿರುವುದೇ 'ಸಜಾತೀಯ...

ಇದನ್ನೂ ಓದಿ: ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

“ಮರವೂರು ಮತ್ತು ಹತ್ತು ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 11 ಕೋಟಿ ರೂಪಾಯಿ ಅನುಮೋದನೆ ಮಾಡಲಾಗಿದೆ. ಬಂಟ್ವಾಳದ ಕೆಲವೆಡೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಘೋಷಿಸಿದರು. ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಹಾಸ್ಟೆಲ್ ನಿರ್ಮಾಣಕ್ಕೆ 425 ಕೋಟಿ ರೂಪಾಯಿಯನ್ನು ಸಂಪುಟ ಮಂಜೂರು ಮಾಡಿದೆ” ಎಂದರು.

“ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು 20 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಮಂಗಳೂರಿನ ಎಕ್ಕೂರು ಗ್ರಾಮದಲ್ಲಿ ಮೀನುಗಾರಿಕೆ ಮಾರುಕಟ್ಟೆ ನಿರ್ಮಾಣಕ್ಕೆ 30 ಕೋಟಿ ರೂಪಾಯಿ ಅನುಮೋದನೆ ನೀಡಲಾಗಿದೆ. ವಿಶೇಷ ಸಮುದ್ರ ವಲಯ (EEZ) ಮತ್ತು ವಿಶೇಷ ಸಂಸ್ಕರಣಾ ವಲಯ (EPZ) 30 ಕೋಟಿ ರೂಪಾಯಿ ಅನುಮೋದನೆ ನೀಡಲಾಗಿದೆ. ಮಂಗಳೂರಿನ ಮೀನುಗಾರಿಕೆ ಕಾಲೇಜಿನಲ್ಲಿ 40 ಸೀಟುಗಳು ಮಾತ್ರ ಇತ್ತು. ಈಗ ವಿಶ್ವವಿದ್ಯಾಲಯ ಮಾಡಿ, 200 ಸೀಟುಗಳಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 11 ಕೋಟಿ ಮೀಸಲಿಡಲಾಗಿದೆ. ರೂಪುರೇಷೆ ತಯಾರಾದ ಬಳಿಕ ಅನುಮೋದನೆ ನೀಡಲಾಗುವುದು” ಎಂದು ತಿಳಿಸಿದರು.

“ಕಾರ್ಕಳದ ಅತ್ತೂರು ಚರ್ಚ್‌ಗೆ 2.75 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಬೆಂಗರೆಯಿಂದ ಉಳ್ಳಾಲ ಕೋಟೆಪುರದವರೆಗೆ ಮೀನುಗಾರಿಕಾ ಬಂದರು, ನಾಡದೋಣಿ ತಂಗುದಾಣ ನಿರ್ಮಾಣಕ್ಕೆ 20 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ” ಎಂದು ತಿಳಿಸಿದರು.

“ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಕಾನೂನಿನಲ್ಲಿ ಕೆಲವು ತಿದ್ದುಪಡಿ ಮಾಡಲಾಗಿದೆ. ಇದರ ಪ್ರಕಾರ ಶೇಕಡ 30ರಷ್ಟು ಮೀಸಲಾತಿ ಬುಡಕಟ್ಟು ಜನಾಂಗಕ್ಕೆ ಸೇರುತ್ತದೆ. ಸೋಲಿಗ, ಜೇನು ಕುರುಬ, ಗೌಡರು, ಮಲೆಕುಡಿಯರು, ಕಾಡುಕುರುಬ, ಎಡವರ, ಕೊರಗರು, ಸಿದ್ಧಿ ಮೊದಲಾದವು ಸೇರಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

ಬಬಲಾದಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 1.67 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಬಬಲಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...