‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸರ್ಕಾರ ನಿರ್ಧಾರ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

Date:

ಸಾಂಸ್ಕೃತಿಕ ನಾಯಕ ಬಸವಣ್ಣ ಮತ್ತು ಲಿಂಗಾಯತ ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ ಎಂಬ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

- Advertisement -

ಗುರುವಾರ ಜರುಗಿದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕೃತಿಯ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಎದ್ದಿರುವ ವಿರೋಧ ಮತ್ತು ಆಕ್ಷೇಪಗಳ ಕುರಿತು ಗಂಭೀರವಾಗಿ ಚರ್ಚಿಸಲಾಯಿತು. ಸಭೆಯ ಮುಕ್ತಾಯದ ನಂತರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಸಂಪುಟದ ನಿರ್ಣಯಗಳನ್ನು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಪ್ರದೇಶ | ಜೈಲಿನಿಂದ ಹೊರಬಂದ ಆಜಂ ಖಾನ್:ಚುನಾವಣಾ...

ಹನ್ನೊಂದು ತಿಂಗಳ ಸುದೀರ್ಘ ಜೈಲುವಾಸದ ನಂತರ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ಸಮಾಜವಾದಿ ಪಕ್ಷದ (SP) ಹಿರಿಯ ನಾಯಕ ಆಜಂ ಖಾನ್ ಅವರ ಆಕ್ರಮಣಕಾರಿ ಮಾತುಗಳು ಉತ್ತರ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯ...

ಧರ್ಮಗಳ ಜನಸಂಖ್ಯೆಯ ಲೆಕ್ಕಾಚಾರಕ್ಕಿಂತ ಸಂಪನ್ಮೂಲಗಳ ನ್ಯಾಯಯುತ ಹಂಚಿಕೆಯ ಚರ್ಚೆ...

ಭಾರತದ ಆರ್ಥಿಕತೆ ಬೆಳೆಯುತ್ತಿದೆ ಎಂಬುದು ಒಂದು ವಾಸ್ತವ. ದೇಶದ ಒಟ್ಟು ಆಂತರಿಕ ಉತ್ಪನ್ನ ಹೆಚ್ಚಳ, ಕೈಗಾರಿಕಾ ಬೆಳವಣಿಗೆ, ತಂತ್ರಜ್ಞಾನ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ ಮತ್ತು ಸೇವಾ ವಲಯದ ಪ್ರಗತಿ ಆರ್ಥಿಕ ಬೆಳವಣಿಗೆಯ ಸೂಚಕಗಳಾಗಿವೆ....

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಸರ್ಕಾರದ ವಶಕ್ಕೆ ಪಡೆದು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ, ಕೃತಿಕಾರ ರವಿ ಹಂಜ್ ಮತ್ತು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಕಾನೂನು ಕ್ರಮದ ಭಾಗವಾಗಿ ಎಫ್‌ಐಆರ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿ. ಪರಮೇಶ್ವರ ಅವರು ವಿವರಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಈ ಕಠಿಣ ನಿರ್ಧಾರದ ಬೆನ್ನಲ್ಲೇ, ಕೃತಿಯ ಲೇಖಕ ರವಿ ಹಂಜ್ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಇಬ್ಬರ ವಿರುದ್ಧವೂ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರು, ಬಸವಣ್ಣನವರ ಕುರಿತು ರವಿ ಹಂಜ್ ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ |ಏಕಾದಶಿ ಹಬ್ಬದ ಹಿನ್ನೆಲೆ: ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯವು ಧಾರವಾಡ...

ಬೀದರ್‌ | ಕಬ್ಬಿಗೆ ₹4,000 ಬೆಲೆ ನಿಗದಿಗೆ ಆಗ್ರಹ: ಸಿಡಿದ ಆಕ್ರೋಶ, ವಿವಿಧೆಡೆ ರೈತರಿಂದ ʼರಸ್ತಾ ರೋಕೊʼ

ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ ₹4,000 ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ...

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...