ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಆಡಳಿತಾತ್ಮಕ ದಕ್ಷತೆ ಹೆಚ್ಚಿಸುವುದು ಹಾಗೂ ನೌಕರರ ಹಿತಾಸಕ್ತಿಯನ್ನು ಕಾಪಾಡುವುದು ಈ ಮಾರ್ಗಸೂಚಿಗಳ ಮುಖ್ಯ ಉದ್ದೇಶ.
ವರ್ಗಾವಣೆ ಪ್ರಕ್ರಿಯೆ ಇಂದಿನಿಂದಲೇ (ಏಪ್ರಿಲ್ 14 , 2026) ಪ್ರಾರಂಭವಾಗಿದ್ದು, ಅರ್ಹ ಮತ್ತು ಆಸಕ್ತ ನೌಕರರು ತಮ್ಮ ಅರ್ಜಿಗಳನ್ನು ಸಲ್ಲಿಸಲು ಮೇ 31, 2026 ಕೊನೆಯ ದಿನಾಂಕವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಒತ್ತು ನೀಡಿದೆ. ಅರ್ಜಿ ಸಲ್ಲಿಸುವ ಎಲ್ಲ ನೌಕರರೂ ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ವೈಯಕ್ತಿಕ ಮನವಿಗಳಿಗಿಂತ ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಇದನ್ನೂ ಓದಿ : ಹಾಸನ ಮಣ್ಣಿನ ಹೆಣ್ಣು ದನಿಗಳು | ಜಿಲ್ಲೆಯ ಕಲಾವಿದೆಯರಿಂದ ಹಸನಾದ ರಂಗಭೂಮಿ
ವಿಶೇಷ ಆದ್ಯತೆಗಳೇನು?
ಕೆಲವು ಮಾನವೀಯ ಕಾರಣಗಳಿಗೆ ಮಾರ್ಗಸೂಚಿಯಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಸಮಸ್ಯೆಗಳು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ ಆದ್ಯತೆ ನೀಡಲಾಗಿದೆ. ಇನ್ನೂ ಮಹಿಳಾ ನೌಕರರು. ಗರ್ಭಿಣಿ ಮಹಿಳೆಯರ ಅರ್ಜಿಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ.
ಕುಟುಂಬದ ತುರ್ತು ಪರಿಸ್ಥಿತಿ: ಮಕ್ಕಳ ಶಿಕ್ಷಣ ಅಥವಾ ಕುಟುಂಬದ ಅವಶ್ಯಕತೆಗಳ ಆಧಾರದ ಮೇಲೆ ವಿನಾಯಿತಿ ನೀಡಲಾಗುತ್ತದೆ.
ಭತ್ಯೆ ಮತ್ತು ಸೌಲಭ್ಯಗಳು
ವರ್ಗಾವಣೆಗೊಂಡ ನೌಕರರಿಗೆ ಸೇವಾ ಅವಧಿ ಮತ್ತು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ವರ್ಗಾವಣೆ ಭತ್ಯೆ (Transfer Allowance) ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ.
ಅರ್ಹ ನೌಕರರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಸರ್ಕಾರ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕೃತ ಜಾಲತಾಣ ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸೂಚಿಸಲಾಗಿದೆ.




