ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲೀಸ್ ಭದ್ರತೆ ಹೆಚ್ಚಳ

Date:

ಸರ್ಕಾರಿ ಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿಗೂಡಿಸಿರುವ ಹಿನ್ನೆಲೆ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಈ ಸಂಬಂಧ ರಾಜ್ಯ ಸರಕಾರ ಅವರಿಗೆ ಪೊಲೀಸ್ ಇಲಾಖೆ ಭದ್ರತೆ ಹೆಚ್ಚಿಸಿದೆ.

- Advertisement -

ಆರ್‌ರಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಕೋರಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಮುಂಜಾನೆಯಿಂದಲೇ ಸಚಿವರ ಖಾಸಗಿ ಮನೆ ಮತ್ತು ಸರಕಾರಿ ನಿವಾಸಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಲ್ಲಿನ ಗಲ್ಫ್ ಕ್ಲಬ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದ ಬಳಿ ಸುಮಾರು 50 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಚಿವರನ್ನು ಭೇಟಿ ಮಾಡುವ ಸಾರ್ವಜನಿಕರನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೇಡಿಗಳಿಂದ ಪ್ರಿಯಾಂಕ್ ಖರ್ಗೆಗೆ ಬೆದರಿಕೆ
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಬೇಕೆಂದು ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಗುರಿಯಾಗಿಸಿಕೊಂಡು ಬೆದರಿಕೆ ಹಾಕುತ್ತಿರುವವರು ಹೇಡಿಗಳು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರು ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುವ ಮೂಲಕ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಆದರೆ, ಇದು ಪ್ರಜಾಪ್ರಭುತ್ವಕ್ಕೆ ನೀಡುತ್ತಿರುವ ಬೆದರಿಕೆ ಆಗಿದ್ದು, ಇಂತಹ ಹೇಡಿಗಳಿಗೆ ನಾವು ಹೆದರುವುದಿಲ್ಲ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ವೈಚಾರಿಕವಾಗಿ ಬಹಿರಂಗ ಚರ್ಚೆಗೆ ಬರಲಿ, ನಾವು ದಿಟ್ಟ ಉತ್ತರ ನೀಡುತ್ತೇವೆ. ಆದರೆ, ಜೀವ ಬೆದರಿಕೆಗೆ ಹಾಕುವ ಹಂತಕ್ಕೆ ಹೋಗುವುದು ಒಳ್ಳೆಯ ಬೆಳವಣಿಗೆ ಅಲ್ಲ. ಆರ್‌ಎಸ್‌ಎಸ್‌ನವರು ಲಾಠಿ ಹಿಡಿದು ಧರ್ಮ ರಕ್ಷಣೆ ಮಾಡುತ್ತೇವೆ ಎನ್ನುತ್ತಾರೆ. ಲಾಠಿಗೂ ಧರ್ಮಕ್ಕೆ ಸಂಬಂಧವೇನು? ಹೃದಯದಿಂದ ಧರ್ಮ ಕಟ್ಟಬೇಕೆ ಹೊರತು ಹಿಂಸೆಯಿಂದ ಅಲ್ಲ ಎಂದು ಅಭಿಪ್ರಾಯಪಟ್ಟರು.

ಪರಿಶೀಲಿಸಿ ಕ್ರಮ

‘ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರೆಸ್ಸೆಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರಕಾರ ತೀರ್ಮಾನ ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಮಾಡುವುದು ಸರಿಯಲ್ಲ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

‘ನಾವು ಹೆಚ್ಚು ಶಕ್ತಿಶಾಲಿಯಾದಷ್ಟು, ಶತ್ರುಗಳು ಹೆಚ್ಚು. ಕಡಿಮೆ ಶಕ್ತಿ ಇದ್ದರೆ ಕಡಿಮೆ ಶತ್ರುಗಳು. ಶಕ್ತಿಯೇ ಇಲ್ಲದಿದ್ದರೆ, ಶತ್ರುಗಳೂ ಇರುವುದಿಲ್ಲ’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...