ಬೀದಿ ವ್ಯಾಪಾರಿಗಳ ಸಮೀಕ್ಷೆಗೆ ಸರ್ಕಾರ ಗ್ರೀನ್ ಸಿಗ್ನಲ್: ಆದರೂ ಮುಂದುವರಿದ ತೆರವು ಕಾರ್ಯಾಚರಣೆ

Date:

ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯು ನಡೆಸಿದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಬೀದಿ ವ್ಯಾಪಾರಿಗಳ ಮರುಸಮೀಕ್ಷೆ ನಡೆಸಲು ಮತ್ತು ತಾತ್ಕಾಲಿಕ ‘ಟೌನ್ ವೆಂಡಿಂಗ್ ಸಮಿತಿ’ಗಳನ್ನು ರಚಿಸಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಖ್ಯ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಮತ್ತು ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂಬ ಸರ್ಕಾರದ ನಿಲುವಿನ ವಿರುದ್ಧ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ನೆನ್ನೆ ನಡೆದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಇಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಬೀದಿ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಿಗಳು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
  • 2024ರ ಸಮೀಕ್ಷೆಯಲ್ಲಿ ಹೊರಗುಳಿದವರನ್ನು ಒಳಗೊಂಡಂತೆ ಎಲ್ಲಾ ವ್ಯಾಪಾರಿಗಳಿಗೆ ಸಮಗ್ರ ಮರುಸಮೀಕ್ಷೆ ನಡೆಸಲು ಸಚಿವರು ಒಪ್ಪಿಗೆ ನೀಡಿದ್ದಾರೆ.
  • ರೇಷನ್ ಕಾರ್ಡ್ ಕಡ್ಡಾಯಗೊಳಿಸುವ ಬದಲು, ಆಧಾರ್, ಮತದಾರರ ಗುರುತಿನ ಚೀಟಿ ಸೇರಿದಂತೆ ಯಾವುದೇ ಒಂದು ಮಾನ್ಯ ದಾಖಲೆಯನ್ನು ಪರಿಗಣಿಸುವಂತೆ ವ್ಯಾಪಾರಿಗಳು ಒತ್ತಾಯಿಸಿದ್ದು, ಸಚಿವರು ಈ ಬಗ್ಗೆ ಮರುಪರಿಶೀಲನೆಯ ಭರವಸೆ ನೀಡಿದ್ದಾರೆ.
  • ನಗರದಾದ್ಯಂತ ತಾತ್ಕಾಲಿಕ ಟೌನ್ ವೆಂಡಿಂಗ್ ಸಮಿತಿಗಳನ್ನು (TVC) ಶೀಘ್ರವೇ ರಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ ಸಚಿವರು, “ಮುಖ್ಯ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಬೀದಿ ವ್ಯಾಪಾರಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ. ಪಾದಚಾರಿಗಳ ಹಿತದೃಷ್ಟಿಯಿಂದ ತೆರವು ಕಾರ್ಯಾಚರಣೆ ನಿರಂತರವಾಗಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಪಾದಚಾರಿ ಮಾರ್ಗದಲ್ಲಿನ ಅವಘಡಗಳಿಂದ 1000ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಅಂಕಿಅಂಶವನ್ನು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ವಿಷ ಸೇವಿಸಿ ತಂದೆ-ಮಗಳ ಸಾವು, ತಾಯಿ-ಮಗನ ಸ್ಥಿತಿ ಗಂಭೀರ!

ಸಚಿವರ ಈ ನಿಲುವಿಗೆ ಜಂಟಿ ಹೋರಾಟ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ. “ಪಾದಚಾರಿಗಳ ಸಾವಿಗೂ ಬೀದಿ ವ್ಯಾಪಾರಿಗಳಿಗೂ ನೇರ ಸಂಬಂಧವಿಲ್ಲ. ಸಂಚಾರ ಪೊಲೀಸ್ ಇಲಾಖೆಯ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು ಕುಡಿದು ವಾಹನ ಚಲಾಯಿಸುವುದರಿಂದ ಸಂಭವಿಸುತ್ತಿವೆ” ಎಂದು ಸಮಿತಿ ವಾದಿಸಿದೆ. ಅಲ್ಲದೆ, ಸ್ಥಳಾಂತರದ ಹೆಸರಿನಲ್ಲಿ ಅಧಿಕಾರಿಗಳು ಕೇವಲ ತೆರವು ಕಾರ್ಯಾಚರಣೆಯನ್ನೇ ಮಾಡುತ್ತಿದ್ದಾರೆ ಹೊರತು, ಪರ್ಯಾಯ ಜಾಗ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಬೀದಿ ವ್ಯಾಪಾರಿಗಳ ಕಾಯ್ದೆ ಮುಖ್ಯ ರಸ್ತೆಗಳಿಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿರುವ ಸಂಘಟನೆಗಳು, ಟೌನ್ ವೆಂಡಿಂಗ್ ಸಮಿತಿಯಲ್ಲಿ ಚರ್ಚಿಸದೆ ವ್ಯಾಪಾರಿಗಳನ್ನು ತೆರವುಗೊಳಿಸುವುದು ಕಾನೂನುಬಾಹಿರ ಎಂದು ಅಭಿಪ್ರಾಯಪಟ್ಟಿವೆ. ಸರ್ಕಾರದ ಈ ದ್ವಂದ್ವ ನಿಲುವಿನ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ರೂಪಿಸಲು, ಜಂಟಿ ಹೋರಾಟ ಸಮಿತಿಯು ನಾಳೆ (ಜು.10)ತುರ್ತು ಸಭೆ ಸೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...