ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Date:

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ.

ನಿನ್ನೆಯೇ ಪ್ರಕರಣದ ತನಿಖೆ ಸಿಐಡಿ ಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‌ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ‌ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ‌ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಾಳೆ ಬೆಳಗಾವಿಗೆ NHRC ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದು, ಈ ಹಿನ್ನೆಲೆ ಜಿಲ್ಲೆಯ ಸರ್ಕ್ಯೂಟ್ ಹೌಸ್​ನಲ್ಲೇ ಪೊಲೀಸರಿಂದ ಮಾಹಿತಿ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ, ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ಪ್ರಕರಣ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್‌ ಸಿನ್ನೂರ್‌ ಅವರನ್ನ ಅಮಾನತು ಮಾಡಲಾಗಿದೆ.

ಸಂತ್ರಸ್ತೆಗೆ ನೆರವುಗಳ ಮೇಲೆ ನೆರವು ಘೋಷಣೆ ಮಾಡಲಾಗಿದೆ. ಮೊನ್ನೆಯಷ್ಟೇ ರಾಜ್ಯ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ನಿನ್ನೆ ಜಮೀನು ಮಂಜೂರು ಮಾಡಲಾಗಿದೆ. ಸಚಿವ ಬಿ.ನಾಗೇಂದ್ರ ನಿರ್ದೇಶನ ಮೇಲೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ 2.3 ಎಕರೆ ಜಮೀನು ಕೊಡಲಾಗಿದೆ.

ಇದೇ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಅತ್ತ ಸತ್ಯಶೋಧನಾ ಸಮಿತಿ ಸ್ಥಳದಲ್ಲಿ ಸತ್ಯ ಶೋಧನ ನಡೆಸಿದ್ದರೆ, ಇತ್ತ ಬಿಜೆಪಿ ಕಾರ್ಯಕರ್ತರು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ-ಜೆಡಿಎಸ್‌ ಅಭ್ಯರ್ಥಿಗೆ 45 ಮತ ಗಳಿಸುವುದೇ ಸವಾಲು

ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯು ಬಿಜೆಪಿ-ಜೆಡಿಎಸ್ ಮೈತ್ರಿ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದೆ....

ಗ್ಯಾರಂಟಿ ವಿರೋಧಿಸುವವರು ದೇಶದ್ರೋಹಿಗಳು: ಮಲ್ಲಿಕಾ ಘಂಟಿ

“ಗ್ಯಾರಂಟಿಗಳನ್ನು ವಿರೋಧಿಸುವವರನ್ನು ದೇಶದ್ರೋಹಿಗಳು ಎಂದರೆ ತಪ್ಪೇನಿಲ್ಲ” ಎಂದು ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ...

ದೇಶದಲ್ಲಿರುವುದು ಬ್ರಾಹ್ಮಣ, ಬನಿಯಾ ರಿಪಬ್ಲಿಕ್: ವಿಎಲ್‌ಎನ್

"ಭಾರತದಲ್ಲಿ ಪ್ರಜಾಪ್ರಭುತ್ವ ಕ್ಷೀಣಿಸುತ್ತಾ ಬನಾನ ರಿಪಬ್ಲಿಕ್ ಆಗುತ್ತಿದೆ ಎಂದು ಅನೇಕರು ಹೇಳುತ್ತಾರೆ....

ಬಿಜೆಪಿ, ಜೆಡಿಎಸ್‌ನವರು ಹಿಂದೂ ದೇವಾಲಯಗಳ ದೊಡ್ಡ ವಿರೋಧಿಗಳು: ಡಿ ಕೆ ಶಿವಕುಮಾರ್‌

"ಬಿಜೆಪಿಯವರದ್ದು ಮಾತೇ ಬೇರೆ, ಕೃತಿಯೇ ಬೇರೆ. ಅವರೇ ಹಿಂದೂ ದೇವಾಲಯಗಳ ದೊಡ್ಡ...