ಆರ್ಥಿಕ ಅಪರಾಧದ ಕಂಪನಿಗಳಿಗೆ ಸರ್ಕಾರ ಬ್ರ್ಯಾಂಡ್ ಅಂಬಾಸಿಡರ್: ಸಂಸದ ಗೋವಿಂದ ಕಾರಜೋಳ ಟೀಕೆ

Date:

ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

- Advertisement -

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾತನಾಡಿದ ಅವರು, “ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸತ್ತಿದ್ದು, ಈ ದುರ್ಘಟನೆಗೆ ಸಿದ್ದರಾಮಯ್ಯನವರ ಸರ್ಕಾರ ನೇರ ಹೊಣೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು. ಹಿಂದಿನ ಸರಕಾರ ಈ ಆರ್ಥಿಕ ಅಪರಾಧಿ ಕಂಪನಿಗಳ ಸಂಭ್ರಮಾಚಾರಣೆಗೆ ಮುಂದಾಗಿಲ್ಲ ಹಾಗೂ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿಲ್ಲ. ಆದರೆ, ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವಂತದ್ದು ಸಿದ್ದರಾಮಯ್ಯನವರ ಸರ್ಕಾರ. ಕಾಲ್ತುಳಿತ ದುರಂತಕ್ಕೆ ನೇರವಾಗಿ ಕರ್ನಾಟಕ ಸರ್ಕಾರವೇ ಹೊಣೆ” ಎಂದು ದೂರಿದರು.

“ದೇಶದ ಇಬ್ಬರು ಆರ್ಥಿಕ ಅಪರಾಧಿಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಒಂದನೆಯದ್ದು ಆರ್‌ಸಿಬಿ. ಇದು ವಿಸ್ಕಿ ಮಾರಾಟಕ್ಕಾಗಿ ಹುಟ್ಟಿಕೊಂಡ ವಿಜಯ್ ಮಲ್ಯರವರ ಒಂದು ಕಂಪನಿ. ಎರಡನೆಯದ್ದು ‘ಐಪಿಎಲ್’. ಇದು ಲಲಿತ್ ಮೋದಿಯವರದ್ದು. ಇವರು ಕೂಡ ದೇಶದ ಆರ್ಥಿಕ ಅಪರಾಧಿ. ಇಬ್ಬರು ಆರ್ಥಿಕ ಅಪರಾಧಿಗಳು ಅಪರಾಧವನ್ನು ಮಾಡಿ ದೇಶದ ಖಜಾನೆಗೆ ಕನ್ನ ಹಾಕಿ ದೇಶ ಬಿಟ್ಟು ಹೋದವರು” ಎಂದು ಟೀಕಿಸಿದರು.

“ಯಾವ ಕಾರಣಕ್ಕಾಗಿ ವಿಜಯ ಮಲ್ಯ ಅವರ ಆರ್.ಸಿ.ಬಿ. ಕಂಪನಿ ಮತ್ತು ಲಲಿತ್ ಮೋದಿಯವರ ಐಪಿಎಲ್ ಕಂಪನಿಗೆ ರಾಜ್ಯ ಸರ್ಕಾರ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೀರಿ ಎಂಬುದನ್ನು ಈ ದೇಶದ ಜನತೆ ಮತ್ತ ನಾಡಿನ ಜನತೆ ತಿಳಿಸಬೇಕಾಗಿತ್ತು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...