BREAKING NEWS | ಗೌರವಧನ ಹೆಚ್ಚಳಕ್ಕೆ ಸರ್ಕಾರದ ಲಿಖಿತ ಆದೇಶ: 13 ದಿನಗಳ ಆಶಾ ಕಾರ್ಯಕರ್ತೆಯರ ಧರಣಿ ಅಂತ್ಯ

Date:

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 13 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಭಾನುವಾರ (ನವೆಂಬರ್ 29) ಅಂತ್ಯಗೊಂಡಿದೆ.

- Advertisement -

ಪ್ರತಿಭಟನಾಕಾರರ ಬಿಗಿಪಟ್ಟಿಗೆ ಮಣಿದಿರುವ ರಾಜ್ಯ ಸರ್ಕಾರವು, 2027ರ ಜನವರಿ 1ರಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸುವ ಕುರಿತು ಅಧಿಕೃತವಾಗಿ ಲಿಖಿತ ಟಿಪ್ಪಣಿ ಹೊರಡಿಸಿದ ಬೆನ್ನಲ್ಲೇ ಕಾರ್ಯಕರ್ತೆಯರು ಧರಣಿಯನ್ನು ಹಿಂಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ನವೆಂಬರ್ 28ರಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಆರೋಗ್ಯ ಸಚಿವ ಯು ಟಿ ಖಾದರ್ ಅವರು ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾಸಿಕ ಗೌರವಧನವನ್ನು ₹2,000 ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಹಿಂದಿನ ಭರವಸೆಗಳು ಈಡೇರದ ಕಾರಣ ಮೌಖಿಕ ಮಾತನ್ನು ನಂಬಲು ನಿರಾಕರಿಸಿದ್ದ ಕಾರ್ಯಕರ್ತೆಯರು, ಲಿಖಿತ ಆದೇಶ ನೀಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು 13ನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದರು.

ಇದನ್ನೂ ಓದಿ: ಸಂಧಾನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರಿಕೆ

ಕಾರ್ಯಕರ್ತೆಯರ ತೀವ್ರ ವಿರೋಧ ಮತ್ತು ಪಟ್ಟಿನ ಹಿನ್ನೆಲೆಯಲ್ಲಿ ಭಾನುವಾರ (ನ. 29) ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಅಧಿಕೃತ ಆದೇಶ ರವಾನಿಸಿದ್ದಾರೆ. ಈ ಟಿಪ್ಪಣಿಯಲ್ಲಿ, ದಿನಾಂಕ 01.01.2027 ರಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ₹2,000 ರಂತೆ ಹೆಚ್ಚಿಸಲು ಅಗತ್ಯ ಪ್ರಕ್ರಿಯೆಗಳನ್ನು ಆದ್ಯತೆಯ ಮೇರೆಗೆ ಪ್ರಾರಂಭಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ಮಾಸಿಕ ಸುಮಾರು ₹8,000 ಗೌರವಧನ (ನಿಗದಿತ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿ) ದೊರೆಯುತ್ತಿದೆ. ರಾಜ್ಯ ಸರ್ಕಾರ ಐದು ಸಾವಿರ, ಕೇಂದ್ರ ಸರ್ಕಾರ ಎರಡು ಸಾವಿರ ರೂಪಾಯಿ ನೀಡುತ್ತದೆ. ಕಾರ್ಯನಿರ್ವಹಣೆ ಆಧಾರಿತ ಪ್ರೋತ್ಸಾಹಧನ ಒಂದರಿಂದ ಎರಡು ಸಾವಿರ ಇರುತ್ತದೆ. ಆದರೆ ಇಂದಿನ ಬೆಲೆ ಏರಿಕೆಯಲ್ಲಿ ಮತ್ತು ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಈ ಮೊತ್ತ ಅತಿ ಕಡಿಮೆ.

ಆದ್ದರಿಂದ ಮಾಸಿಕ ₹15,000 ನಿಶ್ಚಿತ ಗೌರವಧನ ಮತ್ತು ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನವೆಂಬರ್ 17ರಂದು ಈ ಅನಿರ್ದಿಷ್ಟಾವಧಿ ಹೋರಾಟ ಆರಂಭವಾಗಿತ್ತು. ಮಳೆ ಮತ್ತು ಚಳಿಯ ನಡುವೆಯೂ ಸಾವಿರಾರು ಮಹಿಳೆಯರು 13 ದಿನಗಳ ಕಾಲ ನಿರಂತರವಾಗಿ ಧರಣಿ ನಡೆಸಿದ್ದು, ಇದೀಗ ಸರ್ಕಾರದಿಂದ ಎರಡು ಸಾವಿರ ಅಧಿಕೃತ ಲಿಖಿತ ಭರವಸೆ ಕೈಸೇರಿದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಡಿ.9ರವರೆಗೂ ಅಬ್ಬರಿಸುವ ಸಾಧ್ಯತೆ: ಹವಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದ...

ಡಿಲಿಮಿಟೇಶನ್ | ಸ್ಟಾಲಿನ್, ಪವಾರ್ ಮನವೊಲಿಸಲು ಚೆನ್ನೈಗೆ ದೌಡಾಯಿಸಿದ ಖರ್ಗೆ, ರಾಹುಲ್, ಸೋನಿಯಾ, ಮಮತಾ, ಅಖಿಲೇಶ್

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ...

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...