ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್ ಸೇರಿದಂತೆ ಒಟ್ಟು ಮೂವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್. ಗಾಯತ್ರಿ ಅವರು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಇದನ್ನೂ ಓದಿ: ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಏಕೈಕ ಮಹಿಳೆ ಕರ್ನಾಟಕದ ಡಾ. ಶಾಲಿನಿ ರಜನೀಶ್
ಸಿಎಂ ಡಿಕೆಶಿ ಮಾಧ್ಯಮ ಕಾರ್ಯದರ್ಶಿಗಳು
ಪಿ. ತ್ಯಾಗರಾಜ್: ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 1
ಆರ್. ಜಯಪ್ರಕಾಶ್: ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 2
ರಾಘವೇಂದ್ರ ಭಟ್: ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ – 3

ಈ ಪೈಕಿ ಪಿ. ತ್ಯಾಗರಾಜ್ ಅವರು ಕರ್ನಾಟಕ ಮಾಧ್ಯಮ ರಂಗದಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಹಿರಿಯ ಪತ್ರಕರ್ತರು. ಮುಖ್ಯವಾಹಿನಿಯ ಪ್ರಮುಖ ದಿನಪತ್ರಿಕೆಗಳಲ್ಲಿ ಮುಖ್ಯ ವರದಿಗಾರರಾಗಿ ಹಾಗೂ ರಾಜಕೀಯ ಅಂಕಣಕಾರರಾಗಿ ದೀರ್ಘಕಾಲ ಸೇವೆ ಸಲ್ಲಿಸಿದವರು.




