ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಸಂತರ ಹೆಸರು, ಕೇಂದ್ರ ಗೃಹ ಇಲಾಖೆಗೆ ಸರ್ಕಾರ ಶಿಫಾರಸು

Date:

ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳಿಗೆ ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಅವರು ಶಿಫಾರಸು ಮಾಡಿ‌ದ್ದಾರೆ.

- Advertisement -

ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಸಚಿವರು ಪತ್ರ ಬರೆದಿದ್ದು, ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಹಾಗೂ ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ರಾಜ್ಯ ಸರ್ಕಾರ ಈ ನಾಲ್ಕು ನಿಲ್ದಾಣ ಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ಅವರು ವಿವರಿಸಿದರು.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಸಚಿವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...