ಕನ್ನಡದ ಮಹತ್ವದ ಕೃತಿಗಳು ವಿಶ್ವದ ನಾನಾ ಭಾಷೆಗಳಿಗೆ ಭಾಷಾಂತರಗೊಳ್ಳಲು ಸರ್ಕಾರ ಸಹಕಾರ: ಸಿದ್ದರಾಮಯ್ಯ

Date:

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

- Advertisement -

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಂಪನಾ ಅವರ ‘ಚಾರು ವಸಂತ’ ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ ‘ಚಾರು ವಸಂತ’ ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್‌ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ. ಕನ್ನಡ ವಿಶ್ವದ ಎಲ್ಲ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ” ಎಂದರು.

“ಹಂಪನಾ ಅವರ ಚಾರು ವಸಂತ ಕಾವ್ಯ, ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು” ಎಂದು ಹೇಳಿದರು.

“ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ. ‘ಚಾರು ವಸಂತ’ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...