ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸೇರಿ ಒಂದೇ ದಿನ ಮೂರು ಸುಗ್ರೀವಾಜ್ಞೆಗಳಿಗೆ ರಾಜ್ಯಪಾಲರು ಅಸ್ತು

Date:

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆ ಸೇರಿದಂತೆ ಮಂಗಳವಾರ ಒಂದೇ ದಿನದಲ್ಲಿ ಮೂರು ಸುಗ್ರೀವಾಜ್ಞೆಗಳಿಗೆ ಅಸ್ತು ಎಂದಿದ್ದಾರೆ.

- Advertisement -

ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆ, ಸಿವಿಲ್ ಸೇವೆಗಳ ತಿದ್ದುಪಡಿ ಸುಗ್ರೀವಾಜ್ಞೆ, ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ(ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಈ ಬೆನ್ನಲ್ಲೇ ಈ ಕಾಯ್ದೆಗಳ ಜಾರಿಗೆ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬಜೆಟ್ 2025 | ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ವಿಮೆ

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ

ಇ-ಕಾಮರ್ಸ್‌ ಹಾಗೂ ಫುಡ್‌ ಡೆಲಿವರಿ ಕಂಪನಿಗಳಲ್ಲಿ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಲಕ್ಷಾಂತರ ಮಂದಿ ಗಿಗ್ ಕಾರ್ಮಿಕರಿದ್ದಾರೆ. ಆದರೆ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲ. ಅಪಘಾತವಾದರೆ ವಿಮೆಗಳಿಲ್ಲ. ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ(ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ ಜಾರಿಗೊಳಿಸಲಾಗುತ್ತಿದೆ. ಹಂತ ಹಂತವಾಗಿ ಹಲವು ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ.

ಕಡ್ಡಾಯ ಸೇವಾ ತಿದ್ದುಪಡಿ ಕಾಯ್ದೆ

ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ(ತಿದ್ದುಪಡಿ) ಆದೇಶಕ್ಕೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಮೇ 27ರಿಂದ ಜಾರಿಗೊಳಿಸಲಾಗಿದೆ. ಎಂಬಿಬಿಎಸ್‌ ಪದವೀಧರರನ್ನು ಮೊದಲು ಗ್ರಾಮೀಣ ಹುದ್ದೆಗಳಿಗೆ ನೇಮಿಸಿ ಎಲ್ಲಾ ಹುದ್ದೆಗಳು ಭರ್ತಿಯಾದ ಬಳಿಕ ನಗರ ಪ್ರದೇಶಗಳಲ್ಲಿನ ಹುದ್ದೆಗಳಿಗೆ ನೇಮಿಸಲು ಕಡ್ಡಾಯ ಸೇವಾ(ತಿದ್ದುಪಡಿ) ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ. ಹಾಗೆಯೇ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಆದ್ಯತೆಯಲ್ಲಿ ಭರ್ತಿ ಮಾಡಲು, ಉಳಿದ ಖಾಲಿ ಹುದ್ದೆಗಳಿಗೆ ಸಾಂಸ್ಥಿಕ ಕೋಟಾದಡಿ ಓದಿದ ವಿದ್ಯಾರ್ಥಿಗಳನ್ನು ತುಂಬಲು, ಉಳಿದ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಕೂಡಾ ಈ ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ.

ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ಕಾಯ್ದೆ

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ)ತಿದ್ದುಪಡಿ ಸುಗ್ರೀವಾಜ್ಞೆಯೂ ಮೇ 27ರಿಂದಲೇ ಜಾರಿಯಾಗಿದೆ. ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ, ನೇಮಕಾತಿ ಅಥವಾ ಮುಬಂಡ್ತಿಯನ್ನು ಕೌನ್ಸಿಲಿಂಗ್ ಮೂಲಕ ನಡೆಸಬೇಕು ಎಂದು ಈ ತಿದ್ದುಪಡಿ ಕಾಯ್ದೆ ಹೇಳುತ್ತದೆ. ವೈದ್ಯಾಧಿಕಾರಿ ಮತ್ತು ಇತರ ಸಿಬ್ಬಂದಿಯ ಶೇಕಡ 15ರಷ್ಟು ವರ್ಗಾವಣೆ ಹಾಗೂ ಮಹತ್ವದ ಖಾಲಿ ಹುದ್ದೆಗಳಿಗೆ ರಾಜ್ಯ ಸರ್ಕಾರವು ಕೌನ್ಸಿಲಿಂಗ್‌ ಇಲ್ಲದೆಯೂ ನಿಯೋಜಿಸಲು ಈ ಸುಗ್ರೀವಾಜ್ಞೆಯ ಮೂಲಕ ಅವಕಾಶ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಿಗದಿಪಡಿಸಿದಷ್ಟು ಕರ್ತವ್ಯವನ್ನು ಸಲ್ಲಿಸದ ವೈದ್ಯಾಧಿಕಾರಿ ಅಥವಾ ಸಿಬ್ಬಂದಿಯನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಹುದ್ದೆಗೇ ವರ್ಗಾವಣೆ ಮಾಡಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...