ಕೇಂದ್ರ ಗುಪ್ತಚರ ಇಲಾಖೆ ಸೂಚನೆ: ರಾಜ್ಯಪಾಲರಿಗೆ ಝಡ್‌ ಶ್ರೇಣಿ ಭದ್ರತೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಝಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ.

- Advertisement -

ಅಲ್ಲದೇ, ಕಳೆದ ಎರಡು ದಿನಗಳಿಂದ ರಾಜಭವನದ ಸುತ್ತಮುತ್ತ ಹೆಚ್ಚಿನ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತನಿಖೆಗೆ ಅನುಮತಿ ನೀಡಿದ ದಿನದಿಂದ ರಾಜ್ಯಪಾಲರ ವಿರುದ್ಧ ರಾಜ್ಯದಾದ್ಯಂತ ಕಾಂಗ್ರೆಸ್‌ ಕಾರ್ಯ ಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸ ಲಾಗುತ್ತಿದೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎರಡು ದಿನಗಳ ಹಿಂದೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ಸಚಿವರೊಬ್ಬರು, ‘ರಾಜ್ಯದಲ್ಲಿ ಗದ್ದಲ ಹಾಗೂ ಹಲ್ಲೆಗಳು ನಡೆದರೆ ರಾಜ್ಯಪಾಲರೇ ಹೊಣೆ’ ಎಂದು ಎಚ್ಚರಿಸಿದ್ದರು. ರಾಜ್ಯಪಾಲರು ಸಂಚರಿಸುವ ಮಾರ್ಗಗಳಲ್ಲಿ ಅವರಿಗೆ ಪ್ರತಿಭಟನೆಯ ಬಿಸಿತಟ್ಟುವ ಸಾಧ್ಯತೆ ಇದೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಸಿಕ್ಕಿದ್ದು, ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ನಡೆಯುತ್ತಿರುವ ಬೆಳವಣಿಗೆಯ ಮಾಹಿತಿ ಯನ್ನು ರಾಜ್ಯದಲ್ಲಿರುವ ಅಧಿಕಾರಿಗಳಿಂದ ಕೇಂದ್ರ ಗುಪ್ತಚರ ಇಲಾಖೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

ಥಾವರಚಂದ್ ಗೆಹಲೋತ್ ಅವರು ರಾಜ್ಯದ ರಾಜ್ಯಪಾಲರಾಗಿ ನೇಮಕವಾದ ದಿನದಿಂದಲೂ ಇನೋವಾ ಕಾರನ್ನೇ ಓಡಾಟಕ್ಕೆ ಬಳಸುತ್ತಿದ್ದರು. ಈಗ ಅವರ ಭದ್ರತಾ ಸಿಬ್ಬಂದಿಯ ಸೂಚನೆ ಮೇರೆಗೆ ಬುಲೆಟ್‌ ಪ್ರೂಫ್‌ ಕಾರನ್ನು ಬಳಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಆಗಸ್ಟ್ 29ರ‌ವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿ ಆಗದಂತೆಯೂ ರಾಜ್ಯಪಾಲರಿಗೆ ಗುಪ್ತಚರ ಇಲಾಖೆಯಿಂದ ಸೂಚನೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ನಗರದಲ್ಲಿ ಬುಧವಾರ ನಡೆದ ನೃಪತುಂಗ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರು ಗೈರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...