‘ಅನ್ನಭಾಗ್ಯ’ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ: ಸಚಿವ ಕೆ ಎಚ್‌ ಮುನಿಯಪ್ಪ

Date:

ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್​ ಮುನಿಯಪ್ಪ ತಿಳಿಸಿದರು.

- Advertisement -

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದ ಅಕ್ಕಿಯನ್ನು ಫಲಾನುಭವಿಗಳಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು ಕೊಡಲು ಕೇಂದ್ರ ಸರ್ಕಾರವು ಒಪ್ಪಿಗೆ ಕೊಟ್ಟಿದೆ. ಪ್ರತಿ ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಮ್ಮ ಇಲಾಖೆ ಅಧಿಕಾರಿಗಳು ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ. ಈಗ ಕೇಂದ್ರ ಸಚಿವರು ಅಕ್ಕಿ‌ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಾಕುತ್ತೇವೆ. ಫೆಬ್ರವರಿಯಿಂದ 10 ಕೆಜಿ ಅಕ್ಕಿ ಕೊಡುವ ತೀರ್ಮಾನ ಮಾಡಿದ್ದೇವೆ. 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ನಾವು ನುಡಿದಂತೆ ನಡೆದಿದ್ದೇವೆ. ರಾಜ್ಯದ ಜನರಿಗೆ ಅಕ್ಕಿ, ಹಣ ಎರಡನ್ನೂ ಕೊಟ್ಟಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಕೆಂದ್ರ ಸರ್ಕಾರ ಮೊದಲು ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ ನಂತೆ ಕೊಡಲು ನಿರ್ಧರಿಸಿದೆ. ದರ ಪರಿಷ್ಕರಣೆ‌ ಹಿನ್ನೆಲೆಯಲ್ಲಿ ‌ಮೂರು ತಿಂಗಳು ಹಣ ಹಾಕಿಲ್ಲ. ಒಂದು ವಾರದೊಳಗೆ ಸಕಾಲದಲ್ಲಿ ಹಣ ಹಾಕುತ್ತೇವೆ. ರಾಜ್ಯದ ಜನರಿಗೆ ಈಗಾಗಲೇ ನವೆಂಬರವರೆಗೂ ಹಣ ನೀಡಿದ್ದೇವೆ. ಜನವರಿವರೆಗೆ ಹಣವನ್ನು ಡಿಬಿಟಿ ಮೂಲಕ ಹಾಕುತ್ತೇವೆ ಎಂದು ಭರವಸೆ ನೀಡಿದರು.

ಅನ್ನ ಭಾಗ್ಯ ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು. ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಆದರೆ ಕಳೆದ 2 ತಿಂಗಳಿನಿಂದಲೂ ಯಾವುದೇ ಹಣ ಜಮೆಯಾದ ಹಿನ್ನೆಲೆ ಈ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಆದರೀಗ ಹಣದ ಬದಲಿಗೆ ಅಕ್ಕಿಯನ್ನು ಕೊಡುವುದಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...