ಗುತ್ತಿಗೆದಾರ ಸಚಿನ್ ಪಾಂಚಾಳ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ: ಸಚಿವ ಖಂಡ್ರೆ

Date:

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರಿಗೆ ಐವರು ಸೋದರಿಯರಿದ್ದು, ಒಬ್ಬರಿಗಾದರೂ ಸರ್ಕಾರಿ ನೌಕರಿ ನೀಡುವಂತೆ ತಾವು ಮನವಿ ಮಾಡುವುದಾಗಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

- Advertisement -

ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸಚಿನ್ ಪಾಂಚಾಳ ಸಾವು ಅತ್ಯಂತ ದುಃಖದಾಯಕ. ಅವರು ನನ್ನ ಮತಕ್ಷೇತ್ರದವರಾಗಿದ್ದು, ಈ ದುರ್ಘಟನೆಯ ಬಳಿಕ ತಾವು ಹೋಗಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಸ್ವತಂತ್ರ ತನಿಖೆಯ ಭರವಸೆ ನೀಡಿದ್ದೆ. ಈಗ ಪ್ರಕರಣವನ್ನು ಸರ್ಕಾರ ಸಿಓಡಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಬಿಜೆಪಿಯವರಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ವಿರುದ್ಧ ಮಾತನಾಡಲು ಯಾವುದೇ ವಿಚಾರ ಇಲ್ಲ. ಹೀಗಾಗಿ ಅಪಪ್ರಚಾರದಲ್ಲಿ ನಿರತವಾಗಿದೆ. ಪ್ರಿಯಾಂಕ್ ಖರ್ಗೆ ವಿರುದ್ಧವೂ ವಿನಾಕಾರಣ ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿ ನಾಯಕರ ಮೇಲೆ ಹಲವು ಭ್ರಷ್ಟಾಚಾರ ಆರೋಪ, ಅಕ್ರಮದ ಆರೋಪ ಇದೆ, ಆ ಬಗ್ಗೆ ಯಾರೂ ಮಾತನಾಡಲ್ಲ. ಆದರೆ ಪ್ರಿಯಾಂಕ್ ಖರ್ಗೆ ವಿರುದ್ಧ ಡೆತ್ ನೋಟ್ ನಲ್ಲಿ ಯಾವುದೇ ಆರೋಪ ಇಲ್ಲದಿದ್ದರೂ ರಾಜೀನಾಮೆ ಕೇಳುವುದು ಅಸಮಂಜಸ, ಇದು ರಾಜಕೀಯ ಪ್ರೇರಿತ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...