ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

Date:

Advertisements

ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು” ಎಂದರು.

Advertisements

“ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು. ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು” ಎಂದು ಸ್ಮರಿಸಿದರು.

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ

“ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು” ಎಂದರು.

“ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು” ಎಂದು ತಿಳಿಸಿದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲ

“ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು” ಎಂದರು.

ಜಾತಿ ಜನಗಣತಿ

“ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವೆ” ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X