ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Date:

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು.

- Advertisement -

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರುವ ಜನಪ್ರತಿನಿಧಿಗಳ ಹೆಸರು ಬಿಟ್ಟು ಹೋಗಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪರಿಷತ್ ಸದಸ್ಯರನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲು ಈ ತಿದ್ದುಪಡಿ ತರಲಾಗಿದೆ” ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

“ಇನ್ನು ಮುಖ್ಯಮಂತ್ರಿಗಳೇ ಜಿಬಿಎ ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಮುಖ್ಯಕಾರ್ಯದರ್ಶಿಗಳು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಹೆಸರು ಸೇರಿಸಲಾಗಿದೆ. ಇನ್ನು ಹಣಕಾಸು ಇಲಾಖೆ ಕಾರ್ಯದರ್ಶಿಗಳನ್ನು ಈ ಸದಸ್ಯರ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ನಡೆದ ಜಿಬಿಎ ಮೊದಲ ಸಭೆಯಲ್ಲಿ ನಾವು ಈ ವಿಚಾರವನ್ನು ಗಮನಿಸಿದೆವು. ವಿರೋಧ ಪಕ್ಷದ ಸದಸ್ಯರು ತಮ್ಮ ರಾಜಕೀಯ ನಿಲುವಿನಿಂದಾಗಿ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ನಾವು ಈ ತಿದ್ದುಪಡಿ ತಂದು ಇವರುಗಳನ್ನು ಜಿಬಿಎ ಸದಸ್ಯರನ್ನಾಗಿ ಸೇರಿಸಲಾಗುತ್ತಿದೆ” ಎಂದು ತಿಳಿಸಿದರು.

Advertisements

ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ

ಈ ವೇಳೆ ಬಿಜೆಪಿ ಶಾಸಕರಾದ ಸುರೇಶ್ ಕುಮಾರ್ ಅವರು ಮಾತನಾಡಿ, “ಈಗಾಗಲೇ 369 ಪಾಲಿಕೆ ಸದಸ್ಯರಿರುತ್ತಾರೆ. ಸರ್ಕಾರ 20 ಸಾವಿರ ಜನರಿಗೆ ಒಬ್ಬ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿದರೆ, ಮತ್ತೆ 369 ಮಂದಿ ಸದಸ್ಯರು ಬರುತ್ತಾರೆ. ಇದು ಯಾವ ರೀತಿ ಸೂಕ್ತ ಎಂಬ ಗೊಂದಲ ಜನರಲ್ಲಿದೆ” ಎಂದು ಕೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಯಾವುದೇ ರೀತಿಯ ಚುನಾವಣೆ ನಡೆಯುವುದಿಲ್ಲ. ಇದು ರಾಜ್ಯಮಟ್ಟದ ಸಂಸ್ಥೆಯಾಗಿದೆ. ಈ ವಿಚಾರವಾಗಿ ಸಧ್ಯಕ್ಕೆ ಸಮಸ್ಯೆ ಬರುವುದಿಲ್ಲ. ಮುಂದೆ ಹೊಸ ಪ್ರದೇಶವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡಾಗ ಆ ಭಾಗದಲ್ಲಿ 6 ತಿಂಗಳ ಒಳಗಾಗಿ ಚುನಾವಣೆ ನಡೆಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಯಾರಾದರೂ ಪಂಚಾಯ್ತಿ ಸದಸ್ಯನಾಗಿದ್ದರೆ, ಅವರಿಗೆ ಇದರಲ್ಲಿ ಮತದಾನದ ಹಕ್ಕು ಬರುವುದಿಲ್ಲ. ಈ ಬದಲಾವಣೆಯ ಹಂತದಲ್ಲಿ ಆ ಪ್ರದೇಶವನ್ನು ಪ್ರತಿನಿಧಿಸಲು ಒಂದು ಅವಕಾಶ ಕಲ್ಪಿಸಿದ್ದೇವೆ. ಇದು ಅಗತ್ಯವಿಲ್ಲ, ಬೇಡ ಎಂದರೆ ಇದನ್ನು ತೆಗೆದುಹಾಕಲು ಸಿದ್ಧವಿದ್ದೇನೆ. ನಿಮ್ಮ ಸಲಹೆಯಂತೆ ನಾಮನಿರ್ದೇಶಿತ ಸದಸ್ಯರ ಸೇರ್ಪಡೆಯನ್ನು ಕೈಬಿಡುತ್ತೇನೆ” ಎಂದರು.

ಜನಪ್ರತಿನಿಧಿಗಳಿಗೆ ಒಂದೇ ಕಡೆ ಮತದಾನದ ಹಕ್ಕು ಇರಬೇಕು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, “ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಚುನಾಯಿತ ಪ್ರತಿನಿಧಿಗಳು ಒಂದೊಂದು ನಗರ ಸಭೆ, ಪುರಸಭೆಗಳಿಗೆ ಬದಲಾವಣೆ ಮಾಡಿಕೊಂಡು ಹೋಗುತ್ತಿರುತ್ತಾರೆ. ಬೆಂಗಳೂರು ಪಾಲಿಕೆ ಚುನಾವಣೆ, ಬಳ್ಳಾರಿ ನಗರ ಸಭೆ ಚುನಾವಣೆ, ಬೀದರ್ ನಲ್ಲಿ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೋಗು ಮತ ಚಲಾಯಿಸುತ್ತಾರೆ. ಇದು ನಕಲಿ ಮತದಾನದಂತಾಗುತ್ತದೆ. ಹೀಗಾಗಿ ಅವರು ಯಾವುದಾದರೂ ಒಂದು ಕಡೆ ಐದು ವರ್ಷ ತಮ್ಮ ಮತದಾನದ ಅಧಿಕಾರ ಹೊಂದಿರಬೇಕು” ಎಂದು ತಿಳಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಶಿವಕುಮಾರ್ ಅವರು “ನಾನು ವಿರೋಧ ಪಕ್ಷದ ನಾಯಕರ ಸಲಹೆಯನ್ನು ಒಪ್ಪುತ್ತೇನೆ. ಯಾರೇ ಆದರೂ ಒಂದೇ ಕಡೆ ಮತ ಹಾಕುವಂತಾಗಬೇಕು. ಆದರೆ ಜಿಬಿಎ ಚುನಾಯಿತ ಸಂಸ್ಥೆಯಲ್ಲ” ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರರಾದ ಶಾಸಕ ಬಸವರಾಜ ರಾಯರೆಡ್ಡಿ ಅವರು, “ಈ ರೀತಿ ಮಾಡಲು ಜನಪ್ರತಿನಿಧಿಗಳ ಕಾಯ್ದೆ ಇದಕ್ಕೆ ಅವಕಾಶ ನೀಡುವುದಿಲ್ಲ. ವಿಳಾಸ ಬದಲಾವಣೆ ಮಾಡಿದರೆ, ನಾನು ಆ ಭಾಗದ ಮತದಾರನಾಗುತ್ತೇನೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆಯನ್ನು ಪರಿಶೀಲಿಸಿ ತೀರ್ಮಾನಕ್ಕೆ ಬನ್ನಿ” ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಹಾಗೆಂದು ಮತದಾನವನ್ನು ಟೂರಿಂಗ್ ಟಾಕೀಸ್ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...