ʼಗೃಹಜ್ಯೋತಿʼಗೆ ಜರಡಿ | ಮತ್ತೆ ಮನೆ ಮನೆಗೆ ಅರ್ಜಿ, ಅನರ್ಹರಿಗೆ ಗೇಟ್‌ಪಾಸ್!

Date:

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯಲ್ಲಿನ ಅವ್ಯವಸ್ಥೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಮಹತ್ವದ ಸುಧಾರಣೆಯನ್ನು ಘೋಷಿಸಿದ್ದಾರೆ.

- Advertisement -

ಪ್ರಸ್ತುತ ರಾಜ್ಯದಲ್ಲಿ 1.64 ಕೋಟಿಗೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ, ಈ ಯೋಜನೆಯಲ್ಲಿ ವ್ಯಾಪಕ ದುರ್ಬಳಕೆಯಾಗುತ್ತಿದ್ದು, ನೈಜ ಫಲಾನುಭವಿಗಳ ಬದಲಿಗೆ ಅನರ್ಹರು ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅರ್ಹರನ್ನು ಮಾತ್ರ ಗುರುತಿಸಿ ಸೌಲಭ್ಯ ಮುಂದುವರಿಸಲು ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಸಿಎಂ ಘೋಷಿಸಿರುವ ಪರಿಷ್ಕರಣೆಯಲ್ಲಿ, ಹೊರರಾಜ್ಯದವರು ಅಥವಾ ರಾಜ್ಯದ ಮತದಾರರಲ್ಲದವರಿಗೆ ಇನ್ನು ಮುಂದೆ ಈ ಸೌಲಭ್ಯ ಸಿಗುವುದಿಲ್ಲ. ಕೇವಲ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಯೋಜನೆ ಸೀಮಿತವಾಗಲಿದೆ. ಒಂದೇ ವ್ಯಕ್ತಿಯ ಹೆಸರಿನಲ್ಲಿ ಅಥವಾ ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಿದ್ಯುತ್ ಸಂಪರ್ಕಗಳಿಗೆ ಗೃಹಜ್ಯೋತಿ ಪಡೆಯುತ್ತಿದ್ದರೆ, ಅಂತಹ ಸಂಪರ್ಕಗಳನ್ನು ತಕ್ಷಣವೇ ರದ್ದುಗೊಳಿಸಲಾಗುವುದು. ಯೋಜನೆಯ ಪಾರದರ್ಶಕತೆಗಾಗಿ ಇಂಧನ ಇಲಾಖೆ ಸಿಬ್ಬಂದಿಯೇ ಮನೆ ಮನೆಗೆ ಭೇಟಿ ನೀಡಿ ಹೊಸ ಅರ್ಜಿಗಳನ್ನು ವಿತರಿಸಲಿದ್ದಾರೆ. ಆ ಸಂದರ್ಭದಲ್ಲಿ ಅರ್ಜಿದಾರರ ಫೋಟೋ ಹಾಗೂ ಇತರ ದಾಖಲೆಗಳನ್ನು ಖುದ್ದಾಗಿ ಪರಿಶೀಲಿಸಲಾಗುತ್ತದೆ ಎಂಬ ನಿಯಮಗಳನ್ನು ರೂಪಿಸಿದೆ.

ಯೋಜನೆಯ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಪಂಚಾಯತ್ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಲಾಗುತ್ತಿದೆ. ಅಲ್ಲದೆ, ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಿ ಅರ್ಹತೆಯ ಸೂಕ್ಷ್ಮ ಪರಿಶೀಲನೆ ನಡೆಸಲಾಗುವುದು. “ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗಬಾರದು” ಎಂಬುದೇ ಸರ್ಕಾರದ ಗುರಿ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಗೋದಿ ಮೀಡಿಯಾಗಳಿಗೆ ಮುಖ ತಿರುವಿದ ಜನ; ಶೇ.75ರಷ್ಟು ಕುಸಿದ ಆಜ್‌ತಕ್‌, ಇಂಡಿಯಾ ಟುಡೇ ಲಾಭ!

ಈ ಬದಲಾವಣೆಗಳನ್ನು ಸಮರ್ಥಿಸಿಕೊಂಡಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ವ್ಯವಸ್ಥೆಯಲ್ಲಿನ ತಪ್ಪುಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕೈಗೊಂಡ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸುವುದು ಅರ್ಥಹೀನ,” ಎಂದು ಪ್ರತಿಕ್ರಿಯಿಸಿದ್ದಾರೆ.

ಗೃಹಜ್ಯೋತಿ ಯೋಜನೆಯಲ್ಲಿನ ‘ಸೋರಿಕೆ’ಯನ್ನು ತಡೆಯಲು ಮತ್ತು ಯೋಜನೆಯನ್ನು ಮತ್ತಷ್ಟು ಶಿಸ್ತುಬದ್ಧಗೊಳಿಸಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಹೊಸ ಬದಲಾವಣೆಗಳು ಸಾರ್ವಜನಿಕರ ಪಾಲಿಗೆ ಹೇಗೆ ಪರಿಣಮಿಸಲಿವೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್ ನೋಟ್ ನಲ್ಲಿ ಬಯಲಾದ ಅಸಲಿಯತ್ತು!

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...