ಗೃಹ ಲಕ್ಷ್ಮಿ | ಚಾಮುಂಡೇಶ್ವರಿಗೆ ಪ್ರತಿ ತಿಂಗಳು 2000 ರೂ. ಅರ್ಪಿಸಲು ದಿನೇಶ್ ಗೂಳಿಗೌಡ ಮನವಿ

Date:

  • ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ದಿನೇಶ್‌ ಗೂಳಿಗೌಡ ಭೇಟಿ ಮಾಡಿ ಮನವಿ
  • ‘ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ’

ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂಪಾಯಿಯನ್ನು ಇನ್ನು ಮುಂದೆ ಪ್ರತಿ ತಿಂಗಳು ಬಿಡುಗಡೆ ಮಾಡುವ  ಮೊದಲಿಗೆ ಮೈಸೂರಿನ ಚಾಮುಂಡೇಶ್ವರಿ ತಾಯಿಯ ಖಾತೆಗೆ ಮೊದಲು ಎರಡು ಸಾವಿರ ಅರ್ಪಿಸಿ, ನಂತರ ಫಲಾನುಭವಿಗಳಿಗೆ ಹಣ ಹಂಚಬೇಕು ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರನ್ನು ಶುಕ್ರವಾರ ದಿನೇಶ್‌ ಗೂಳಿಗೌಡ ಭೇಟಿ ಮಾಡಿ, ಈ ಸಂಬಂಧ ಈ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರವನ್ನು ಮನವಿ ರೂಪದಲ್ಲಿ ಸಲ್ಲಿಸಿದರು.

ದಿನೇಶ್‌ ಗೂಳಿಗೌಡ ಮಾಡಿದ್ದ ಮನವಿಗೆ ಸ್ಪಂದಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಸೂಕ್ತ ಕ್ರಮವಹಿಸುವಂತೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಸೂಚಿಸಿದ್ದರು. ಈ ವೇಳೆ ಶಾಸಕ ದಿನೇಶ್‌ ಗೂಳಿಗೌಡ ಅವರು ಸಹ ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯೋಜನೆ ಜಾರಿಗೂ ಮುನ್ನ ಹರಕೆ ತೀರಿಸಲು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಕುಟುಂಬ ಕಲ್ಯಾಣ ಸಚಿವರು ದೇಗುಲಕ್ಕೆ ಭೇಟಿ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಮಾತ್ರವಲ್ಲ ಗೃಹ ಲಕ್ಷ್ಮಿಯರಿಗೆ ನೀಡುವ 2 ಸಾವಿರ ರೂ.ಗಳನ್ನು ದೇವಿಗೆ ಸಲ್ಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಪರಿ ನರಮೇಧದ ನಂತರವೂ ಮೇಲೇಳದೇಕೆ ನೆತ್ತರದಾಹಿಗಳ ತಕ್ಕಡಿ?

ಈಗ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ ಎಂದು ಗೂಳಿಗೌಡ ಮನವಿಯಲ್ಲಿ ತಿಳಿಸಿದ್ದಾರೆ.

“ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಆಗುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ನು ಯಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಬೇಕು” ಎಂದು ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ: ಜರ್ಮನಿಗೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ?

ಹಾಸನದ ಅಶ್ಲೀಲ ವೀಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ...