ಗೃಹಲಕ್ಷ್ಮಿ ಯೋಜನೆ | ತೊಂದರೆ ನಿವಾರಣೆಗೆ ಪಂಚಾಯತಿಗಳಲ್ಲಿ ಮೂರು ದಿನ ಶಿಬಿರ

Date:

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

“ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೆಟ್, ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಹಲವು ಮಹಿಳೆಯರು ತೊಂದರೆ ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ತೊಂದರೆಗಳನ್ನು ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರ ಸಜ್ಜುಗೊಳಿಸಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುವುದು, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್‌ಗಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸಿ ನೆರವಾಗಲಿದ್ದಾರೆ ಎಂದು ತಿಳಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಶಿಬಿರದಲ್ಲಿಯೇ ಪರಿಹರಿಸಲಾಗುವುದು, ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಗೃಹಲಕ್ಷ್ಮಿ ಫಲಾನುಭವಿಗಳ ಸಮಸ್ಯೆ ನಿವಾರಣೆಗಾಗಿ ಶಿಬಿರದಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು, ಇ-ಕೆವೈಸಿ ಅಪ್ಡೆಟ್, ಗೃಹಲಕ್ಷ್ಮಿಅರ್ಜಿಯ ಸ್ಥಿತಿ ಪರಿಶೀಲನೆ ಮತ್ತು ಇನ್ನಿತರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಲಾಗುವುದು, ಶಿಬಿರ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27ರಿಂದ ಡಿ.29ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜರುಗಲಿದೆ” ಎಂದು ಸಚಿವ ಖರ್ಗೆ ಮಾಹಿತಿ ನೀಡಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳು ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ಬುಕ್ ದಾಖಲೆಗಳೊಂದಿಗೆ ಶಿಬಿರಕ್ಕೆ ಬರಬೇಕು ಎಂದಿರುವ ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರನ್ನು ಶಿಬಿರಗಳಿಗೆ ಕರೆ ತರುವ ವ್ಯವಸ್ಥೆ ಮಾಡಲಾಗಿದೆ ಹಾಗೂ ಎಸ್.ಎಂ.ಎಸ್ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...