ಜಿಎಸ್‌ಟಿ | ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುತ್ತಿದ್ದಾರೆ: ಡಿ ಕೆ ಶಿವಕುಮಾರ್

Date:

Advertisements

ಸಣ್ಣ ವ್ಯಾಪಾರಿಗಳಿಗೆ ಜಿಎ‌ಸ್‌ಟಿ ನೋಟಿಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು. ತರಕಾರಿ, ಹಣ್ಣು, ಎಳನೀರು, ಹೂವಿನ ವ್ಯಾಪಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುವ ಲಕ್ಷಾಂತರ ಮಂದಿ ಇದ್ದಾರೆ. ಈಗಾಗಲೇ 14 ಸಾವಿರ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆಯೇ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಜಿಎಸ್ ಟಿ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ” ಎಂದು ತಿಳಿಸಿದರು.

ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಬರೆಯುತ್ತೇವೆ. ನಮ್ಮ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಅತಿ ಹೆಚ್ಚು ಜಿಎಸ್‌ಟಿ ತೆರಿಗೆ ಕಟ್ಟುತ್ತಿರುವ ರಾಜ್ಯ ನಮ್ಮದು. ನಮ್ಮ ಬಡ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ” ಎಂದು ಹೇಳಿದರು.

Advertisements

ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಟಾರ್ಗೆಟ್ ನೀಡಿರುವುದರಿಂದ ಈ ನೋಟೀಸ್ ನೀಡಲಾಗಿದೆಯೇ ಎಂದು ಕೇಳಿದಾಗ, “ಕೇಂದ್ರ ಜಿಎಸ್‌ಟಿ ಕೌನ್ಸಿಲ್ ಯಾವ ನಿಯಮ ರೂಪಿಸುತ್ತಾರೋ ಅದರಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೇಂದ್ರದ ಸಮಿತಿಯ ಒತ್ತಡದ ಮೇರೆಗೆ ಈ ನೋಟಿಸ್ ನೀಡಲಾಗಿದೆ” ಎಂದರು.

ಜಿಬಿಎ (ಬ್ರ್ಯಾಂಡ್‌ ಬೆಂಗಳೂರು ಪ್ರಾಧಿಕಾರ) ಅಡಿಯಲ್ಲಿ 5 ಪಾಲಿಕೆ ಮಾಡುವುದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಹಾಕಿರುವ ಬಗ್ಗೆ ಕೇಳಿದಾಗ, “ಯಾರು ಬೇಕಾದರೂ ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ಇದರಲ್ಲಿ ತಪ್ಪೇನಿಲ್ಲ ಇದು ಅವರ ಹಕ್ಕು. ಅದನ್ನು ಮೊಟಕುಗೊಳಿಸಲು ಆಗುವುದಿಲ್ಲ. ನಾವು ಏನಾದರೂ ತಪ್ಪು ಮಾಡಿದ್ದಾರೆ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಐದು ಪಾಲಿಕೆ ಮಾಡಲು ಸರ್ಕಾರ ಬದ್ಧವಾಗಿದೆ. ನಾನು ಬಿಜೆಪಿ ನಾಯಕರ ಸಭೆ ಕರೆದು ಚರ್ಚಿಸಿ ಸಲಹೆಗಳನ್ನು ಸ್ವೀಕರಿಸಿದ್ದೇನೆ. ಜಂಟಿ ಸದನ ಸಮಿತಿ ರಚಿಸಿ ಚರ್ಚೆ ಮಾಡಲಾಗಿದೆ. ಈಗಲೂ ಅವರು ತಮ್ಮ ಆಕ್ಷೇಪಣೆ ಸಲ್ಲಿಸಬಹುದು. ಅವರು ರಾಜಕೀಯ ಕಾರಣಕ್ಕೆ ಧ್ವನಿ ಎತ್ತುತ್ತಿದ್ದಾರೆ. ಬೆಂಗಳೂರಿನ ಹಿತಕ್ಕಾಗಿ ಐದು ಪಾಲಿಕೆ ಮಾಡಲು ಮುಂದಾಗಿದ್ದೇವೆ. ಮುಂದಿನ ಒಂದೆರಡು ದಿನಗಳಲ್ಲಿ ಮಾಧ್ಯಮಗೋಷ್ಠಿ ಕರೆದು ಎ ಖಾತಾ, ಬಿ ಖಾತಾ ವಿಚಾರ, ಇ-ಖಾತಾ ಅಭಿಯಾನ, ತೆರಿಗೆ ಹಾಗೂ ಪಾಲಿಕೆ ವಿಚಾರವಾಗಿ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಸುರ್ಜೆವಾಲಾ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “25ಕ್ಕೆ ನಾನು ಹಾಗೂ ಸಿಎಂ ದೆಹಲಿ ಪ್ರವಾಸ ಮಾಡುತ್ತಿದ್ದೇವೆ. ಇನ್ನು ಸಂಸತ್ ಅಧಿವೇಶನ ನಡೆಯುತ್ತಿದೆ. ನನಗೆ ಗೊತ್ತಿರುವ ಮಾಹಿತಿ ಇಷ್ಟೆ” ಎಂದು ತಿಳಿಸಿದರು.

ಎಸ್‌ಐಟಿ ರಚನೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಪರ ವಿರೋಧ ಚರ್ಚೆ ಆಗುತ್ತಿದೆ. ಇದನ್ನು ಗೃಹ ಸಚಿವರು ನಿಭಾಯಿಸುತ್ತಿದ್ದು, ಬಹಳ ಹಿರಿಯ ಅಧಿಕಾರಿಗಳನ್ನು ಎಸ್‌ಐಟಿ ತಂಡದಲ್ಲಿ ನಿಯೋಜಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ” ಎಂದರು.

ವಿಷಯಾಂತರ ಮಾಡಲು ಎಸ್‌ಐಟಿ ರಚಿಸಿದ್ದಾರೆ ಎಂದು ಕೇಳಿದಾಗ, “ನಾವು ಏನು ಮಾಡಿದರೂ ಬಿಜೆಪಿ ವಿರೋಧ ಮಾಡುತ್ತದೆ” ಎಂದರು.

ಸ್ಥಳೀಯ ಪೊಲೀಸ್ ತನಿಖೆ ನಂತರ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಎಂದು ಸಿಎಂ ಹೇಳಿದ ಬೆನ್ನಲ್ಲೇ ದಿಢೀರನೆ ಎಸ್ ಐಟಿ ರಚನೆಯಾಗಿದೆ ಎಂದು ಕೇಳಿದಾಗ, “ಮಾಧ್ಯಮಗಳು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದಾಗ ನಾವು ಮಾಧ್ಯಮಗಳಿಗೆ ಗೌರವ ನೀಡಬೇಕಲ್ಲವೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ನಿಮಗೂ ನಮ್ಮಷ್ಟೇ ಜವಾಬ್ದಾರಿ ಇದೆ. ನಿಮ್ಮ ಹಾಗೂ ವಿರೋಧ ಪಕ್ಷಗಳ ಹಿತವಚನ, ನುಡಿಮುತ್ತುಗಳನ್ನು ನಾವು ಕೇಳಬೇಕು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X