ಜಿಎಸ್‌ಟಿ ಸುಧಾರಣೆ, ಮೋದಿ ಸರ್ಕಾರದಿಂದ ದೀಪಾವಳಿ ಉಡುಗೊರೆ: ಹೆಚ್‌ ಡಿ ಕುಮಾರಸ್ವಾಮಿ

Date:

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, “ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು ಆತ್ಮನಿರ್ಭರ ಭಾರತವನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

“ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...

ಮುಸ್ಲಿಂ ಕೈಗಾರಿಕೋದ್ಯಮಿಗಳ ಸಂಘದಿಂದ ಅ. 31ರಂದು ‘ಉಡಾನ್ 2026’ – ಹಲವು ಉದ್ಯಮಿಗಳು ಭಾಗಿ

ಕೈಗಾರಿಕಾ ವಲಯದ ಸವಾಲುಗಳನ್ನು ಎದುರಿಸಲು, ಸರ್ಕಾರದ ಸೂಕ್ತ ನೀತಿಗಳ ಬೆಂಬಲ ಪಡೆಯಲು...

ಶೋಷಿತ ವರ್ಗಗಳು ಒಂದಾದರಷ್ಟೇ ರಾಜಕೀಯ ಅಧಿಕಾರ ಸಾಧ್ಯ: ಎಂಎಲ್‌ಸಿ ಹೆಚ್.ಪಿ. ಸುಧಾಮ್ ದಾಸ್

ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಗಡಿಗಳನ್ನು ಮೀರಿ ಎಲ್ಲ ಶೋಷಿತ ವರ್ಗಗಳನ್ನು ಒಂದೇ...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...