ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಎಚ್ ಕೆ ಪಾಟೀಲ

Date:

Advertisements

ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ಸೆ.9 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ ಅವರು ಇಂದು ಗದಗನಲ್ಲಿ ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡು ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಒಪ್ಪಿಗೆ ಪಡೆದು ಇಂದು ಅಧಿಸೂಚಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿ ಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ. ಅಕ್ರಮ ಗಣಿಗಾರಿಕೆ ಕುರಿತು ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ನನ್ನ ಅಧ್ಯಕ್ಷತೆಯಲ್ಲಿ ಜು.5ರಂದು ಸಚಿವ ಸಂಪುಟದ ಉಪಸಮಿತಿ ರಚನೆಯಾಗಿತ್ತು. ಈ ಸಮಿತಿಯು ಆ.8 ರಂದು ಮಾನ್ಯ ಸಚಿವ ಸಂಪುಟಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಜೊತೆಗೆ ಕರಡು ಮಸೂದೆಯನ್ನು ಸಹ ಸಚಿವ ಸಂಪುಟಕ್ಕೆ ಮಂಡಿಸಿತ್ತು. ಈ ಮಸೂದೆಯೊಂದಿಗೆ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಸಚಿವ ಸಂಪುಟವು ಸರ್ವಾನುಮತದಿಂದ ಅಂಗೀಕರಿಸಿ, ಅಕ್ರಮ ಗಣಿಗಾರಿಕೆ ವಿರುದ್ಧ ಅತ್ಯಂತ ಕಠಿಣಾತಿ-ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ರಾಜ್ಯ ಸಚಿವ ಸಂಪುಟದ ನಿರ್ಣಯದಂತೆ ಆ.18 ರಂದು ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಆ.21 ರಂದು ವಿಧಾನಸಭೆಯಲ್ಲಿ ಮತ್ತು ಆ.22 ರಂದು ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಯಿತು.

ಈ ವಸೂಲಾತಿ ಆಯುಕ್ತರ ನೇಮಕದಿಂದಾಗಿ ರಾಜ್ಯದಲ್ಲಿ ಆರ್ಥಿಕ ಶಿಸ್ತು ತರಲು ಸೂಕ್ತವಾದಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಇಂದು ಗದಗನಲ್ಲಿ ಪ್ರಕಟಿಸಿದ್ದಾರೆ.

ರಾಜ್ಯಪಾಲರು ಸೆ.9 ರಂದು ಈ ಐತಿಹಾಸಿಕ ಮಸೂದೆಗೆ ಅಂಕಿತ ಹಾಕುವ ಮೂಲಕ ಸರ್ಕಾರದ ಬದ್ದತೆಗೆ ಮುದ್ರೆ ಒತ್ತಿದ್ದಾರೆ ಎಂದು ಹೇಳಿದರು. ಕನ್ನಡಿಗರ ಆಸ್ತಿ ಕನ್ನಡಿಗರಿಗೆ ಮರಳಿಸುವ ಉದ್ದೇಶ ಈಡೇರಿದೆ. ನಮ್ಮ ಪಕ್ಷ ಮತ್ತು ಸರ್ಕಾರ ಈ ಮೊದಲು ಕನ್ನಡ ನಾಡಿನ ಜನತೆಗೆ ನೀಡಿದ ವಾಗ್ದಾನವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಗಣಿ ಹಗರಣದ ಕಾರಣ ಕಳೆದ ಒಂದೂವರೆ ತಿಂಗಳಿನಿಂದ ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಮಾರ್ಗದರ್ಶನದಲ್ಲಿ ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಳ್ಳಲು ಪ್ರಾರಂಭಿಸಿತ್ತು ಎಂದು ಸಚಿವರು ನೆನಪಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X