ಹನೂರು ಎನ್‌ಕೌಂಟರ್ ಪ್ರಕರಣ : ಸ್ವತಂತ್ರ ನ್ಯಾಯಾಂಗ ತನಿಖೆಗೆ ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕ ಒತ್ತಾಯ

Date:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ಮಹಮ್ಮದ್ ಸಾದ್ ಬೆಳ್ಗಾಮಿ ಅವರು ತೀವ್ರ ಆಘಾತ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ.

- Advertisement -

​ಎನ್‌ಕೌಂಟರ್ ಹೆಸರಿನಲ್ಲಿ ಪ್ರಾಣ ತೆಗೆಯುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಘಟನೆಯಲ್ಲಿ ಬಂದೂಕು ಬಳಸಿ ಪ್ರಾಣ ತೆಗೆಯುವ ಅಗತ್ಯವೇನಿತ್ತು ಮತ್ತು ಅದು ಎಷ್ಟರ ಮಟ್ಟಿಗೆ ಸಮರ್ಥನೀಯ ಎಂಬ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ನಾಡಕೋವಿಯೊಂದಿಗೆ ಬೇಟೆಯಾಡುವ ಉದ್ದೇಶದಿಂದ ಅಕ್ರಮ ಪ್ರವೇಶ ಮಾಡಿದರು ಎಂಬ ಕಾರಣಕ್ಕೆ ಗುಂಡಿಕ್ಕಿ ಕೊಲ್ಲುವುದನ್ನು ಬೆಂಬಲಿಸಲು ಸಾಧ್ಯವಿಲ್ಲ. ಶಸ್ತ್ರಾಸ್ತ್ರ ಬಳಸುವಾಗ ಅಧಿಕಾರಿಗಳು ಕಾನೂನಿನ ಮಿತಿಯಲ್ಲಿಯೇ ಕಾರ್ಯನಿರ್ವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

​ಈ ಘಟನೆಯ ನಿಜಾಂಶ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ತಕ್ಷಣವೇ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಬೇಕೆಂದು ಡಾ. ಸಾದ್ ಬೆಳಗಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರೊಂದಿಗೆ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ಹಾಗೂ ಸರ್ಕಾರಿ ನೆರವು ನೀಡಿ ನ್ಯಾಯ ಒದಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...