‘ಜನರ ಸಮಸ್ಯೆ ಕೇಳಲು ಹೋದ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ’: ಪ್ರಜ್ವಲ್ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಆರೋಪ

Date:

ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಲು ಹೋದ ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಆರೋಪಿಸಿದ್ದಾರೆ.

- Advertisement -

ಮೇ 1ರಂದು ಎಸ್‌ಐಟಿ ತಂಡ 44 ವರ್ಷದ ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮಾಧ್ಯಮವೊಂದು ವರದಿಸಿರುವ ಎಫ್‌ಐಆರ್‌ ದಾಖಲೆಯ ಮಾಹಿತಿಯಂತೆ, ಮಹಿಳೆ ತಾನು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾಗ ತನ್ನ ಭಾಗದ ಹಲವು ಅಭಿವೃದ್ಧಿ ಕೆಲಸಗಳ ಕುರಿತು ಮಾತನಾಡುವ ಸಲುವಾಗಿ ಶಾಸಕ ಹಾಗೂ ಸಂಸದರ ಮನೆಗೆ ಆಗಾಗ ತೆರಳುತ್ತಿದ್ದರು.

2021ರಲ್ಲಿ ನಡೆದ ಒಂದು ಘಟನೆಯನ್ನು ಮಹಿಳೆ ವಿವರಿಸಿದ್ದಾರೆ. ತಮ್ಮ ಭಾಗದ ಸ್ಥಳೀಯ ಕಾಲೇಜೊಂದರಲ್ಲಿ ಕೆಲವು ಮಹಿಳಾ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್‌ ಪ್ರವೇಶ ದೊರಕಿಸಿಕೊಡುವಂತೆ ಹೋಗಿದ್ದರು. ಅಂದು ಸಂಸದರು ಕೆಲಸದಲ್ಲಿ ನಿರತರಾಗಿದ್ದು, ಮರುದಿನ ಬರುವಂತೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ರಾಡಿಯಲ್ಲಿ ಕಳೆದು ಹೋದದ್ದು ಹೆಣ್ಣಿನ ಘನತೆ ಅಷ್ಟೇ ಅಲ್ಲ, ʼಸಾಮಾಜಿಕ ಶೀಲʼ ಬೀದಿಗೆ ಬಿದ್ದಿದೆ

“ಮರು ದಿನ ನಾನು ಹಾಸನದಲ್ಲಿನ ಸಂಸದರ ಕಚೇರಿಗೆ ತೆರಳಿದೆ. ಹಲವು ಮಂದಿ ಇರುವುದರಿಂದ ಕಚೇರಿ ಸಿಬ್ಬಂದಿ ಮೊದಲ ಮಹಡಿಯಲ್ಲಿ ಕಾಯುವಂತೆ ತಿಳಿಸಿದರು. ಪ್ರಜ್ವಲ್ ಎಲ್ಲ ಮಹಿಳೆಯರನ್ನು ಕಳಿಸಿದ ನಂತರ ನನ್ನನ್ನು ಕೊಠಡಿಯೊಳಗೆ ಕರೆದ. ಕೊಠಡಿಯೊಳಗೆ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ನನ್ನ ಕೈಹಿಡಿದು ಎಳೆದುಕೊಂಡು ಕೊಠಡಿಯ ಬಾಗಿಲನ್ನು ಮುಚ್ಚಿದ” ಎಂದು ಸಂತ್ರಸ್ತೆ ದಾಖಲಿಸಿದ್ದಾರೆ.

“ನಾನು ಸಂಸದನನ್ನು ಕೊಠಡಿಯ ಬಾಗಿಲು ಏಕೆ ಮುಚ್ಚಿದರೆಂದು ಕೇಳಿದೆ. ಸಂಸದ ಏನು ಆಗುವುದಿಲ್ಲ ಎಂದು ಮಂಚದ ಮೇಲೆ ಕೂರಿಸಿದರು. ನಿನ್ನ ಪತಿಗೆ ಕಡಿಮೆ ಮಾತನಾಡಲು ಹೇಳು ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದರು. ನಿನ್ನ ಪತಿಯಿಂದ ನನ್ನ ತಾಯಿ ಭವಾನಿ ರೇವಣ್ಣ ಅವರಿಗೆ ಎಂಎಲ್‌ಎ ಟಿಕೆಟ್ ತಪ್ಪಿ ಹೋಯಿತು. ನಿನ್ನ ಪತಿ ರಾಜಕೀಯವಾಗಿ ಮೇಲೆ ಬರಬೇಕಾದರೆ ನಾನು ಹೇಳಿದಂತೆ ಕೇಳಬೇಕು ಎಂದು ಪ್ರಜ್ವಲ್‌ ಎಚ್ಚರಿಸಿದ” ಎಂದು ಮಹಿಳೆ ಹೇಳಿದ್ದಾರೆ.

“ನಂತರ ಪ್ರಜ್ವಲ್‌ ನನ್ನನ್ನು ಮಂಚದ ಮೇಲೆ ತಳ್ಳಿ ನನ್ನನ್ನು ವಿವಸ್ತ್ರಳನ್ನಾಗಿ ಮಾಡಿದ. ನಾನು ನಿರಾಕರಿಸಿ ಕಿರುಚಿದ್ದಕ್ಕೆ ನನ್ನ ಬಳಿ ಗನ್‌ ಇರುವುದಾಗಿ ಹೇಳಿ ಮುಂದೆ ನೀನು, ನಿನ್ನ ಪತಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಜೀವ ಬೆದರಿಕೆಯೊಡ್ಡಿದ” ಎಂದು ಮಹಿಳೆ ಪೊಲೀಸರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಅನಂತರ ಸಂಸದ ನನ್ನ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯವೆಸಗಿದ. ಅದನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡ. ಇದರ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಬೆದರಿಸಿದ. ಈ ಘಟನೆ ನಡೆದ ನಂತರದಲ್ಲಿ ಆಗಾಗ ನನ್ನೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡುತ್ತಿದ್ದ. ವಿಡಿಯೋ ಕರೆಯ ವೇಳೆ ನನ್ನನ್ನು ಬೆತ್ತಲಾಗುವಂತೆ ಹೇಳುತ್ತಿದ್ದ. ಇದಲ್ಲದೆ ಹಲವು ಬಾರಿ ನನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ” ಎಂದು ಮಹಿಳೆ ಹೇಳಿದ್ದಾರೆ.

ಸಂಸದನ ಬಗ್ಗೆ ಭಯಗೊಂಡ ಕಾರಣ ಮಹಿಳೆ ಈ ಘಟನೆಯನ್ನು ಎಲ್ಲೂ ಹೇಳಿರಲಿಲ್ಲ. ಲೈಂಗಿಕ ಹಗರಣ ಬೆಳಕಿಗೆ ಬಂದು ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆಯನ್ನು ಮಾಡಿದ ನಂತರ ವಿಶೇಷ ತನಿಖಾ ತಂಡದ ಮುಂದೆ ಘಟನೆಯ ಬಗ್ಗೆ ವಿವರಿಸಿದ್ದಾರೆ.

ಈ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣನ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್‌) (ಒಂದೇ ಮಹಿಳೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗುವುದು), 506(ಬೆದರಿಸುವಿಕೆ), 354ಎ(1)(ದೈಹಿಕ ಸಂಪರ್ಕ ಹಾಗೂ ಇಷ್ಟವಿಲ್ಲದ ಲೈಂಗಿಕ ಚಟುವಟಿಕೆಗಳು), 354ಬಿ (ಹಲ್ಲೆ ಅಥವಾ ವಿವಸ್ತ್ರಗೊಳಿಸುವ ಉದ್ದೇಶದೊಂದಿಗೆ ಅಪರಾಧವೆಸಗುವುದು) ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಪ್ರಜ್ವಲ್‌ ಹಾಗೂ ಆತನ ತಂದೆ ಹೆಚ್‌ ಡಿ ರೇವಣ್ಣ ವಿರುದ್ಧ ಏ.28 ರಂದು ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಕೂಡ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮೇ.2 ರಂದು ಮೈಸೂರಿನ ಕೆ ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಹೆಚ್‌ ಡಿ ರೇವಣ್ಣ ಹಾಗೂ ಆತನ ಸಹಾಯಕನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಹಾಸನ | SIR ರದ್ದು;,ಗ್ಯಾನೇಶ್ ಕುಮಾರ್ ವಜಾಕ್ಕೆ DYFI, SFI, AIDSO ಆಗ್ರಹ

ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...