ವಿರೋಧದ ನಡುವೆ ದ್ವೇಷ ಭಾಷಣ ವಿಧೇಯಕ ಅಂಗೀಕಾರ; ವಿಪಕ್ಷಗಳ ಆಕ್ರೋಶ

Date:

ದ್ವೇಷ ಭಾಷಣಕ್ಕೆ ತಡೆ ಹಾಕುವ ನಿಟ್ಟಿನಲ್ಲಿ “ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ( ಪ್ರತಿಬಂಧಕ) ವಿಧೇಯಕ” 2025 ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ವಿಪಕ್ಷಗಳ ವಿರೋಧ ಹಾಗೂ ಸದನದ ಬಾವಿಯಲ್ಲಿ ಧರಣಿ ನಡುವೆ ಹೆಚ್ಚಿನ ಚರ್ಚೆಗೆ ಅವಕಾಶ ಆಗದಂತೆ ಮಸೂದೆ ಅಂಗೀಕಾರಗೊಂಡಿತು.

- Advertisement -

ವಿಧೇಯಕದ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿ “ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಸಮಾಜಕ್ಕೆ ನೋವಾಗುವ ರೀತಿಯಲ್ಲಿ ಮಾತುಗಳನ್ನು ಆಡುತ್ತಿದ್ದಾರೆ. ಇದರ ಪ್ರಮಾಣ ಜಾಸ್ತಿಯಾಗಿದೆ. ಅದರ ಪರಿಣಾಮವಾಗಿ ಸಮಾಜದಲ್ಲಿ ಕೊಲೆಗಳು, ಹೊಡೆದಾಟಗಳು ನಡೆದಿವೆ. ಇದನ್ನು ನಿಯಂತ್ರಣ ಮಾಡಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಸಾಮಾಜಿಕ, ರಾಜಕೀಯ ಸಭೆಗಳಲ್ಲಿ ಆಡುವ ದ್ವೇಷದ ಮಾತುಗಳು ಮತ್ತೊಂದು ಸಮುದಾಯದ ಮೇಲೆ ಪರಿಣಾಮ ಬೀರುತ್ತಿದೆ. ದ್ವೇಷ ಭಾಷಣದಲ್ಲಿ ಮತ್ತೊಂದು ಸಮುದಾಯದ ಬಗ್ಗೆ ಕೆಟ್ಟ ಮಾತುಗಳನ್ನು ಆಡಲಾಗಿದೆ. ದ್ವೇಷ ಭಾಷಣ ಮಾಡುವ ವ್ಯಕ್ತಿಗಳಿಗೆ ಎಷ್ಟು ದಿನ ನಿರ್ಬಂಧ ಹೇರಲು ಸಾಧ್ಯ? ಹೀಗಾಗಿ ಕಾನೂನು ತರಲಾಗಿದೆ ಎಂದು ವಿವರಿಸಿದರು.

ಹತ್ತು ವರ್ಷದ ಬದಲಾಗಿ 7 ವರ್ಷ
ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.

ಈಗಾಗಲೇ ಮುದ್ರಿತ ಪುಸ್ತಕಗಳಿಗೂ ಅನ್ವಯ!
ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ಕೊಟ್ಟ ಪರಮೇಶ್ವರ್, “ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೂ ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ” ಎಂದು ವಿವರಿಸಿದರು.

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ!
ವಿಧೇಯಕದ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, “75 ವರ್ಷದ ಹಿಂದೆ ಯಾವ ತಜ್ಞರಿಗೆ ಬಾರದ ಆಲೋಚನೆ ನಮ್ಮ ಗೃಹ ಸಚಿವರಿಗೆ ಏಕೆ ಬಂತು? ರಾಜಕೀಯ ದ್ವೇಷ ತೀರಿಸಿಕೊಳ್ಳಲು ಇದನ್ನು ಬಳಕೆ ಮಾಡುವಂತಹ ಅವಕಾಶ ಸಿಕ್ಕಂತಾಗಿದೆ”ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳು ಹಿಟ್ಲರ್ ಆಗಲು ಅವಕಾಶ ಇದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಲಿದೆ. ಕಾರ್ಟೂನ್ ರಚಿಸಲು ಅವಕಾಶ ಇಲ್ಲದಂತಾಗುತ್ತದೆ. ಭ್ರಷ್ಟಾಚಾರದಂತಹ ಗಂಭೀರ ಆರೋಪ ಸುದ್ದಿ ಮಾಡಿದರೆ ಮಾಧ್ಯಮದ ಪ್ರತಿನಿಧಿಗಳು ಮೊದಲೇ ಜಾಮೀನು ಪಡೆಯುವಂತಹ ಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ವಿಧೇಯಕ ಜಾರಿಗೆ ತರುವ ಉದ್ದೇಶ ಓಟ್ ಬ್ಯಾಂಕ್ ರಾಜಕಾರಣವಾಗಿದೆ. ತುರ್ತುಪರಿಸ್ಥಿತಿ ಜಾರಿಗೆ ತಂದವರಿಂದ ಇನ್ನೇನು ಬಯಸಲು ಸಾಧ್ಯ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

ವಿಧೇಯಕದಲ್ಲಿ ಏನಿದೆ?
ದ್ವೇಷ ಭಾಷಣ ಪ್ರಸರಣೆ, ಪ್ರಕಟಣೆ, ಪ್ರಚಾರ ತಡೆಯಲು ವಿಧೇಯಕ ತರಲಾಗಿದೆ.

ನಿರ್ದಿಷ್ಟ ವ್ಯಕ್ತಿ, ಸಮೂಹ, ಸಂಸ್ಥೆಗಳ ವಿರುದ್ಧ ದ್ವೇಷ ಹುಟ್ಟಿಸುವ ಅಪರಾಧಗಳ ತಡೆಗೆ ವಿಧೇಯಕದಲ್ಲಿ ಅವಕಾಶ.
ಮೊದಲ ಬಾರಿಗೆ ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಟ 1 ವರ್ಷ, ಗರಿಷ್ಟ 7 ವರ್ಷದವರೆಗೆ ಜೈಲು, 50 ಸಾವಿರ ರೂ ದಂಡ.

ಅಪರಾಧ ಪುನರಾವರ್ತನೆ ಆದರೆ ಕನಿಷ್ಟ 2 ವರ್ಷದಿಂದ ಗರಿಷ್ಠ 7 ವರ್ಷದ ವರೆಗೆ ಜೈಲು ಶಿಕ್ಷೆ, 1 ಲಕ್ಷ ರೂ ದಂಡ
ದ್ವೇಷ ಭಾಷಣ ಮಾಡಿ ಕೇಸ್ ಬಿದ್ದರೆ ಅದು ಜಾಮೀನು ರಹಿತ ಪ್ರಕರಣವಾಗಲಿದೆ.

ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟರ ಮೂಲಕ ದ್ವೇಷ ಭಾಷಣಗಳ ವಿಚಾರಣೆಗೆ ಅವಕಾಶ.

ದ್ವೇಷ ಭಾಷಣಗಳ ಪ್ರಕರಣಗಳನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅಥವಾ ಉಪಪೊಲೀಸ್ ವರಿಷ್ಠಾಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲಸ ಯಾರೇ ಪೊಲೀಸ್ ಅಧಿಕಾರಿಯು ಮಾಹಿತಿ ಸ್ವೀಕರಿಸಿದರೆ ವಿಚಾರಣೆ ಮಾಡಿ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅವಕಾಶ.

ಈ ಕಾಯ್ದೆಯಡಿ ದ್ವೇಷ ಭಾಷಣಗಳಿಗೆ ನೊಂದಾಯಿತ ಅಥವಾ ನೊಂದಾಯಿತವಲ್ಲದ ಸಂಘ ಸಂಸ್ಥೆಗಳೂ ಹೊಣೆಗಾರರಾಗಿರುತ್ತಾರೆ ಎಂದು ಉಲ್ಲೇಖ.

ದ್ವೇಷ ಭಾಷಣಗಳ ಕಂಟೆಂಟ್ ಗಳನ್ನು ಡೊಮೈನ್ ನಿಂದ ಬ್ಲಾಕ್ ಮಾಡುವ ಅಥವಾ ತೆಗೆದು ಹಾಕುವ ಅಧಿಕಾರ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...