ದ್ವೇಷ ಭಾಷಣ | ಪೊಲೀಸ್ ಅಧಿಕಾರಿಗಳ ಅಸಡ್ಡೆ ಬಗ್ಗೆ ತನಿಖೆ ನಡೆಸಲು ಸಭಾಧ್ಯಕ್ಷರಿಂದ ಗೃಹ ಸಚಿವರಿಗೆ ಪತ್ರ

Date:

ಕರಾವಳಿ ಭಾಗದಲ್ಲಿ ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ತೋರಿರುವ ಅಸಡ್ಡೆ ಬಗ್ಗೆ ತನಿಖೆ ನಡೆಸುವಂತೆ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ರಾಜ್ಯದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜಘಾತುಕ ವದಂತಿಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಾರಿ ಧಕ್ಕೆ ಉಂಟುಮಾಡುವಂತಹ ಅಪಾಯಕಾರಿ ಸ್ಥಿತಿಯನ್ನು ನಿರ್ಮಾಣ ಮಾಡುತ್ತಿವೆ ಎಂದು ಖಾದರ್‌ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಹಿಂದಿನ ಕೆಲವು ಪೊಲೀಸ್ ಅಧಿಕಾರಿಗಳು ಈ ದ್ವೇಷಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ಅಸಹಾಯಕತೆ ಅಥವಾ ನಿರ್ಲಕ್ಷ್ಯವಹಿಸಿದ್ದಾರೆ. ಆದರೆ ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಸಮರ್ಪಕ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದಾರೆ. ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿ ಭಾಗದಲ್ಲಿ ಒಂದೆರೆಡು ಧರ್ಮಾಧಾರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು ಎಂದು ಹೇಳಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಮಾನಯಾನದ ವಿಶ್ವಾಸ ಕುಂದುತ್ತಿದೆ – ಗಂಭೀರ ಚಿಂತನೆ, ಕ್ರಮಗಳ ಅಗತ್ಯವಿದೆ!

ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟ ಮತ್ತಿತರ ಸಮಾಜಘಾತುಕ ಕೆಲಸಗಳಲ್ಲಿ ನಿಷ್ಠೆಯಿಂದ ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಯಾಕೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣಗಳೇನು ಅನ್ನುವ ಸೂಕ್ತ ತನಿಖೆಯಾಗಬೇಕಿದೆ ಎಂದು ಪತ್ರದಲ್ಲಿ ಖಾದರ್‌ ಆಗ್ರಹಿಸಿದ್ದಾರೆ.

ನಮ್ಮ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು ಎಂಬ ಆಶಯದಿಂದ ಈ ಪತ್ರವನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯಕ್ರಮ ಕೈಗೊಳ್ಳಬೇಕು ಸಭಾಧ್ಯಕ್ಷರು ಗೃಹ ಸಚಿವರನ್ನು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...