ವಿದ್ಯಾರ್ಥಿಗಳಿಗೆ ನಕಲಿ ಪೊಲೀಸರಿಂದ ಹೊಡೆಸಿರುವುದು ಅಕ್ಷಮ್ಯ: ಸಚಿವ ಯುಟಿ ಖಾದರ್

Date:

ದೆಹಲಿಯಲ್ಲಿ NEET ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ನಡೆದಿರುವುದು ಬರೀ ಹಲ್ಲೆಯಲ್ಲ, ನಮ್ಮ ದೇಶದ ಭವಿಷ್ಯದ ಮೇಲೆ ನಡೆದಿರುವ ಹಲ್ಲೆ! ಸ್ಥಳೀಯರು ವೇಷ ಮರೆಸಿ ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. ‌

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ವಿಪಕ್ಷ ನಾಯಕರನ್ನು ಬಂಧಿಸಿದ್ದನ್ನ ನಾವು ಖಂಡಿಸುತ್ತೇವೆ. ಈ ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರ ನೋವಿಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಲಾಠಿ ಒದೆ ನೀಡಿದ್ದಾರೆ. ಇದು ಭಾರತದ ಸಂವಿಧಾನಕ್ಕೆ ಮಾಡಿದ ಅಪಚಾರ. ವಿಶ್ವದಲ್ಲೇ ಭಾರತ ತಲೆತಗ್ಗಿಸುವ ರೀತಿ ಕೇಂದ್ರ ಸರಕಾರ ಮಾಡಿದೆ‌ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ನೀಟ್ ವಿಚಾರವನ್ನ ಒಂದೆಡೆ ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡಲು ಬಿಡೋದಿಲ್ಲ. ಹೊರಗಡೆ ಪ್ರತಿಭಟನೆ ಮಾಡಿದ್ರೆ ಲಾಠಿ ತೆಗೆದುಕೊಂಡು ಹೊಡೀತಾರೆ.‌ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿದ್ದಾರೆ. ಬಹಳಷ್ಟು ವಿದ್ಯಾರ್ಥಿಗಳು ಮಾನಸಿಕ ತೊಂದರೆಗೆ ಒಳಗಾಗಿದ್ದಾರೆ.‌ ಇದಕ್ಕಾಗಿ ನೈತಿಕ ಹೊಣೆಯಾಗಿ ಶಿಕ್ಷಣ ಸಚಿವರ ರಾಜೀನಾಮೆ ಕೇಳೋದು ತಪ್ಪಾ? ಇಲಾಖೆಯ ಬೇಜವಾಬ್ದಾರಿ ನಡೆಗೆ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು.‌ ರಾಜ್ಯದಲ್ಲಿ ಕೆ.ಜೆ ಜಾರ್ಜ್ ಹಾಗೂ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕೂಡಲೇ ರಾಜೀನಾಮೆ ನೀಡಿಲ್ಲವ.? ತನಿಖೆ ಎದುರಿಸಿ ಕೆ.ಜೆ ಜಾರ್ಜ್ ಮತ್ತೆ ಮಂತ್ರಿಯಾಗಿದ್ದಾರೆ. ನೀವು ನೈತಿಕ ಹೊಣೆ ಹೊತ್ತು ಯಾವಾಗ ರಾಜೀನಾಮೆ ನೀಡುತ್ತೀರಾ? ಎಂದು ಖಾದರ್ ಪ್ರಶ್ನಿಸಿದ್ದಾರೆ.

Advertisements

ಇದನ್ನೂ ಓದಿ: ಕಳೆದ 2 ವರ್ಷಗಳಲ್ಲಿ 50 OTT ಪ್ಲಾಟ್‌ಫಾರ್ಮ್‌ಗಳು ಬಂದ್: ಕೇಂದ್ರ ಸರ್ಕಾರ ಮಾಹಿತಿ

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಎಲ್ಲ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿಯೂ ಈ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅನ್ಯಾಯವೇ ಕಾನೂನು ಆಗಿದೆ. ದೇಶದಲ್ಲಿ ಪ್ರತಿಭಟನೆ ಆಗದೆ ಏನಾದರೂ ಬದಲಾವಣೆ ಆಗಿದೆಯೇ? ನೀಟ್ ಪೇಪರ್ ಲೀಕ್ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಪರಿಹಾರ ಕೊಡಬೇಕು ಎಂದು ಕೇಳೋದು ತಪ್ಪಾಗುತ್ತಾ? ಈ ಹಿಂದೆ ಅನೇಕ ನಾಯಕರು ರಾಜೀನಾಮೆ ಕೊಟ್ಟಿದ್ದಾರೆ.‌ ಬಿಜೆಪಿಯವರಿಗೆ ಯಾಕೆ ನೈತಿಕತೆ ಇಲ್ಲ. ಲಾಠಿ ಬೀಸಿ ವಿದ್ಯಾರ್ಥಿಗಳ ಗಾಯದ ಮೇಲೆ ಮತ್ತೆ ಬರೆ ಎಳೆಯುತ್ತೀರಿ. ಇದು ಮುಂದಕ್ಕೆ ದೇಶದ ಜನ ನೋಡಿಕೊಳ್ಳುತ್ತಾರೆ.‌ ಈ ಘಟನೆಯ ಬಗ್ಗೆ ಪ್ರಧಾನ ಮಂತ್ರಿ ಬಾಯಿ ಬಿಡಬೇಕು ಎಂದು ಸಚಿವ ಖಾದರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...