‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

Date:

“ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಆ ಆಸ್ತಿಯನ್ನು ಕುಮಾರಸ್ವಾಮಿ, ಅವರ ಪತ್ನಿ ಮತ್ತು ಮಕ್ಕಳ ಹೆಸರಿಗೆ ಉಚಿತವಾಗಿ ನೋಂದಣಿ ಮಾಡಿಸಿಕೊಡುತ್ತೇನೆ” ಎಂದು ಸಚಿವ ಬಾಲಕೃಷ್ಣ ಸವಾಲು ಹಾಕಿದ್ದಾರೆ.

- Advertisement -

ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಾಸಕ ಡಾ. ಹೆಚ್.ಡಿ. ರಂಗನಾಥ್ ಹಾಗೂ ಸಚಿವ ಹೆಚ್.ಸಿ ಬಾಲಕೃಷ್ಣ ಆಸ್ತಿ ಹೊಂದಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಧಾರರಹಿತ ಆರೋಪಗಳನ್ನು ಮಾಡುವುದು ಕುಮಾರಸ್ವಾಮಿ ಅವರ ಚಾಳಿ. ಈ ಹಿಂದೆ ತಾವರೆಕೆರೆ ಭಾಗದ ಜಮೀನಿನ ಬಗ್ಗೆಯೂ ಹೀಗೆಯೇ ಆರೋಪ ಮಾಡಿದ್ದರು, ಅದಕ್ಕೆ ವಿಧಾನಸಭೆಯಲ್ಲೇ ಸೂಕ್ತ ಉತ್ತರ ನೀಡಿದ್ದೇನೆ. ಈಗ‌ ನೈಸ್ ವಿಚಾರದಲ್ಲಿ ಆರೋಪ ಮಾಡುತ್ತಿದ್ದಾರೆ. ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಹಿರಂಗಪಡಿಸಲಿ” ಎಂದು ಸವಾಲು ಹಾಕಿದ್ದಾರೆ.

ನೈಸ್ ಸಂತ್ರಸ್ತರನ್ನು ಭೇಟಿಯಾಗಿ ಕುಮಾರಸ್ವಾಮಿ ಅಹವಾಲು ಸ್ವೀಕರಿಸಿದ್ದನ್ನು ಟೀಕಿಸಿರುವ ಬಾಲಕೃಷ್ಣ, “ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಅವರಿಗೆ ಸಂತ್ರಸ್ತರ ಅಹವಾಲು ಕೇಳಲು ಸಮಯವಿರಲಿಲ್ಲವೇ? ಆಗ ಸುಮ್ಮನಿದ್ದು, ಈಗ ರಾಜಕೀಯ ಲಾಭಕ್ಕಾಗಿ ಸಂತ್ರಸ್ತರ ಜಪ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ತಮ್ಮ ಅಕ್ರಮ ಆಸ್ತಿ ಇದೆ ಎಂಬುದು ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದಿದ್ದ ಕುಮಾರಸ್ವಾಮಿ ಹೇಳಿಕೆಗೆ ಕಾಲೆಳೆದ ಬಾಲಕೃಷ್ಣ, “ಅವರು ನೇಣು ಹಾಕಿಕೊಳ್ಳುವುದು ಬೇಡ. ನಮ್ಮನ್ನು ಟೀಕಿಸುವುದಕ್ಕಾದರೂ ಅವರು ನಮ್ಮ ಜೊತೆ ಇರಲಿ, ದೇವರು ಅವರಿಗೆ ಇನ್ನಷ್ಟು ಕಾಲ ಆಯುಷ್ಯ ಕೊಡಲಿ” ಎಂದು ಲೇವಡಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...