2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

Date:

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, “ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಯಾವತ್ತೋ ಮುಗಿದುಹೋಗುತ್ತಿತ್ತು. ನಾನೂ ಕೂಡ ಸಿದ್ದರಾಮಯ್ಯ ಅವರ ಜೊತೆ ರಾಜಕೀಯವಾಗಿ ದೊಡ್ಡ ಹೋರಾಟವನ್ನೇ ನಡೆಸಿದ್ದೇನೆ. ಆದರೆ, ಪ್ರಸ್ತುತ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ದೊಡ್ಡ ಮಟ್ಟದ ಹುನ್ನಾರಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಆ ವ್ಯಕ್ತಿಯೇ (ರಾಕೇಶ್ ಶೆಟ್ಟಿ) ತಾನೇ ಸ್ಟಿಂಗ್ ಆಪರೇಷನ್ ಮಾಡಿದ್ದಾಗಿ ಒಪ್ಪಿಕೊಂಡಿರುವಾಗ ತನಿಖೆ ನಡೆಸಲು ಇನ್ಯಾವ ದಾಖಲೆಗಳು ಬೇಕು. ಪಕ್ಷದ ಕಾರ್ಯಕರ್ತೆಯೊಬ್ಬರನ್ನು ಕೂರಿಸಿಕೊಂಡು ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ಒತ್ತಡ ಹೇರಲಾಗುತ್ತಿದ್ದು, ಸಿದ್ದರಾಮಯ್ಯ ಅಲ್ಲಿ ಎಷ್ಟೊತ್ತು ಇದ್ದರು ಅಥವಾ ಅವರ ದೇಹದ ಗುರುತುಗಳಿವೆಯೇ ಎಂದು ಆ ಮಹಿಳೆಯನ್ನು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಲಾಗಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಅಂತಹ ವ್ಯಕ್ತಿಯನ್ನು ಮುಟ್ಟಲು ಪೊಲೀಸರಿಗೆ ಏಕೆ ಸಾಧ್ಯವಾಗುತ್ತಿಲ್ಲ. ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ನಾಯಕರ ಸ್ಟಿಂಗ್ ಆಪರೇಷನ್ ಕೂಡ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ. ಇಂತಹ ಕೃತ್ಯಗಳ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರ ಬಾಯಿಯನ್ನು ಮುಚ್ಚಿಸಲಾಗಿದೆ” ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ತಾನು ಯಾರ ನಿರ್ದೇಶನವನ್ನೂ ಪಡೆದು ಮಾತನಾಡುವುದಿಲ್ಲ. ಮಣ್ಣಿನ ಮಕ್ಕಳು ಸಿನಿಮಾ ಮಾಡಬಹುದು, ಜಾಗ್ವಾರ್ ಕಾರು ಬಳಸಬಹುದು, ಆದರೆ ಒಬ್ಬ ದಲಿತ ಮಾತ್ರ ಬೆಳೆಯಬಾರದೆಂಬ ಧೋರಣೆ ಕುಮಾರಸ್ವಾಮಿ ಅವರದ್ದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...